ಶಿವಸೇನೆ ನಾಯಕ ಸಂಜಯ್ ರಾವತ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಇಡಿ ಅವರ ವಿಚಾರಣೆ ನಡೆಸಿತ್ತು.
ಭಾನುವಾರ ಬೆಳಗ್ಗೆ ಮುಂಬೈನಲ್ಲಿರುವ ಸಂಜಯ್ ರಾವತ್ ಮನೆ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಪತ್ರಾ ಚಾಲ್ ಭೂ ಹಗರಣ ಪ್ರಕರಣದ ಸಂಬಂಧ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಈ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಸಂಜಯ್ ರಾವತ್‌ಗೆ ಸೇರಿದ 1034 ಕೋಟಿ ರೂ. ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಮತ್ತೆ ದಾಳಿ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz