nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ

    September 25, 2026

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026
    Facebook Twitter Instagram
    ಟ್ರೆಂಡಿಂಗ್
    • ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ
    • 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
    • ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಪ್ರತಿಭಟನೆ
    ತುಮಕೂರು August 2, 2022

    ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಪ್ರತಿಭಟನೆ

    By adminAugust 2, 2022No Comments2 Mins Read
    lingayath

    ತುಮಕೂರು: ಆರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಆಗ್ರಹಿಸಿ ಇಂದು ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾದವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ನಂದಿ ಧ್ವಜ,ವೀರಗಾಸೆ ಕಲಾ ಪ್ರದರ್ಶನದ ಜೊತೆಗೆ,ಸಾವಿರಾರು ಸಂಖ್ಯೆಯಲ್ಲಿದ್ದ ಲಿಂಗಾಯಿತ,ವೀರಶೈವ ಸಮುದಾಯದ ಮುಖಂಡರುಗಳು ನಗರದ ಟೌನ್‌ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

    ಪ್ರತಿಭಟನಾನಿರತ ವೀರಶೈವ,ಲಿಂಗಾಯಿತ ಸಮುದಾಯದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕತೊಟ್ಲುಕೆರೆಯ ಶ್ರೀಅಟವಿ ಶಿವಲಿಂಗಸ್ವಾಮೀಜಿ,ಗೊಲ್ಲಹಳ್ಳಿಮಠದ ಶ್ರೀವೀಭವ ವಿದ್ಯಾಶಂಕರ ಸ್ವಾಮೀಜಿ, ಮಾಕನಹಳ್ಳಿ ಮಠದ ಶ್ರೀಗಂಗಾಧರ ಸ್ವಾಮೀಜಿ, ಬೆಳ್ಳಾವಿಯ ಶ್ರೀಕಾರದೇಶ್ವರ ಮಠದ ಶ್ರೀಕಾರದ ವೀರಬಸವಸ್ವಾಮೀಜಿ, ಶ್ರೀರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಹರಳೂರು ಮಠದ ಶ್ರೀ ಚನ್ನಬಸವಸ್ವಾಮೀಜಿಗಳು, ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ವೀರಶೈವ, ಲಿಂಗಾಯಿತರು ಸೇರಿದ್ದಾರೆ.ಆದರೆ ಕೇಂದ್ರದ ಪಟ್ಟಿಯಲ್ಲಿ ಇಲ್ಲ.ಇದರಿಂದ ಯುಪಿಎಸ್ಸಿ,ಸೇರಿದಂತೆ ಕೇಂದ್ರ ಸರಕಾರದ ಉದ್ಯೋಗಗಳಲ್ಲಿ ವೀರಶೈವ ಲಿಂಗಾಯಿತ ಸಮುದಾಯಕ್ಕೆ ಸೇರಿದ ಉಪಪಂಗಡಗಳಿಗೆ ತೀವ್ರ ಅನ್ಯಾಯವಾಗುತ್ತಿದ್ದು,ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೂಡಲೇ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ನಮ್ಮೆಲ್ಲಾ ವೀರಶೈವ,ಲಿಂಗಾಯಿತ ಸಮುದಾಯದ ಉಪಪಂಗಡಗಳ ಒತ್ತಾಯವಾಗಿದೆ ಎಂದರು.

    ವೀರಶೈವ, ಲಿಂಗಾಯಿತ ಸಮುದಾಯವು ಬಹುತೇಕ ಕೃಷಿ ಮತ್ತು ಕೃಷಿಯಾಧಾರಿತ ಕಸುಬುಗಳನ್ನು ಅವಲಂಬಿಸಿದ್ದು, ಆರ್ಥಿಕವಾಗಿ,ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯವಾಗಿದ್ದು,ಕೇಂದ್ರದ ಓಬಿಸಿ ಪಟ್ಟಿಗೆ ಸೇರದ ಕಾರಣ ಹಲವಾರು ದಶಕಗಳಿಂದ ಕೇಂದ್ರ ಸರಕಾರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತು ಕೇಂದ್ರದ ನೇಮಕಾತಿಗಳಿಂದ ವಂಚಿತ ವಾಗಿವೆ. ಆದರೆ ೧೪-೦೯-೧೯೯೪ರಲ್ಲಿ ಕೇಂದ್ರದ ಓಬಿಸಿ ಪಟ್ಟಿಗೆ ವೀರಶೈವ,ಲಿಂಗಾಯಿತ ಸಮುದಾಯಕ್ಕೆ ಸೇರಿದ ೧೬ ಉಪ ಪಂಗಡಗಳನ್ನು ಸೇರಿಸಲಾಗಿದೆ.ಆದೇ ರೀತಿ ಉಳಿದ ಉಪಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರಿಸುವ ಮೂಲಕ ಆ ಸಮುದಾಯಗಳು ಮೀಸಲಾತಿಯ ಲಾಭ ಪಡೆಯಲು ಅವಕಾಶ ಕಲ್ಪಿಸಬೇಕೆಂಬುದು ಅಖಿಲ ಭಾರತ ವೀರಶೈವ, ಲಿಂಗಾಯಿತ ಮಹಾಸಭಾದ ಒತ್ತಾಯವಾಗಿದೆ ಎಂದು ಶ್ರೀಗಳು ತಿಳಿಸಿದರು.

    ಈ ವಿಚಾರವಾಗಿ ೨೦೧೯ರಲ್ಲಿ ಎರಡು ಬಾರಿ ಮತ್ತು ೨೦೨೧ರಲ್ಲಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.ಆದರೆ ಇದುವರೆಗೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸರಕಾರದ ಈ ವಿಳಂಬದಿಂದಾಗಿ ನಮ್ಮ ಮಕ್ಕಳ ಉನ್ನತ ಹುದ್ದೆಗಳ ಕನಸು ಈಡೇರುವ ಲಕ್ಷಣಗಳಿಲ್ಲ.ಇಂದು ಕೂಡ ನಾವು ಸರಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ.ಒಂದು ವೇಳೆ ಸರಕಾರ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆಯಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

    ವೀರಶೈವ, ಲಿಂಗಾಯಿತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಬೇಕೆಂಬ ಒತ್ತಾಯಕ್ಕೆ ರಾಜ್ಯದ ಎಲ್ಲಾ ವೀರಶೈವ,ಲಿಂಗಾಯಿತ ಮಠಾಧೀಶರುಗಳು ಸಹಮತ ವ್ಯಕ್ತಪಡಿಸಿದ್ದು,ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಮನವಿ ಪತ್ರಕ್ಕೆ ಸಹಿ ಹಾಕುವ ಮೂಲಕ ಸರಕಾರಕ್ಕೆ ಒತ್ತಾಯವನ್ನು ಮಾಡಿದ್ದಾರೆ.ಯುಪಿಎಸ್‌ಸಿ,ರೈಲ್ವೆ,ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರಿ ನೇಮಕಾತಿಗಳಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ದ ಹೋರಾಟ ಅನಿವಾರ್ಯ ಎಂದು ಸ್ವಾಮೀಜಿಗಳು ನುಡಿದರು.

    ಪ್ರತಿಭಟನೆಯಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಪಾವರ್ತಿ ಕ.ರೆಡ್ಡಿ,ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ ಪಟೇಲ್,ಪ್ರಧಾನಕಾರ್ಯದರ್ಶಿ ಕೆ.ಟಿ.ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷರುಗಳಾದ  ಎಸ್.ಡಿ.ದಿಲೀಪ್, ಚಂದ್ರಮೌಳಿ,ಜಯರಾಂ,ಕೋಶಾಧ್ಯಕ್ಷರಾದ ಎಂ.ಬಿ.ಶೇಖರ್, ರಾಷ್ಟ್ರೀಯಯಸಮಿತಿ ಸದಸ್ಯರಾದ ರಾಜಶೇಖರ್, ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ವೀರಶೈವ,ಲಿಂಗಾಯಿತ ಕ್ಷೇತ್ರಗಳ ಮುಖಂಡರು ಪಾಲ್ಗೊಂಡಿದ್ದರು.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    ಸಂತಪೂರ:  ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಗ್ರಾಮದಲ್ಲಿ ‘ತುಕಾರಾಮ ಹಸನ್ಮುಖಿ ಗೆಳೆಯರ ಬಳಗ’ದ ವತಿಯಿಂದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ…

    2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ

    September 25, 2026

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.