nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ

    October 28, 2026

    ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ

    October 28, 2026

    ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!

    October 28, 2026
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ
    • ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ
    • ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!
    • ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?
    • ಎಸ್.ಎಸ್. ವೃತ್ತದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ವೀಕ್ಷಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಮಾ.15: ಅಮಾನಿಕೆರೆಯಲ್ಲಿ ಜಲ ಕ್ರೀಡಾ ತರಬೇತಿ ಅಕಾಡೆಮಿ ಆರಂಭ
    • ಪಾವಗಡ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
    • ಎಸ್ ಐಆರ್: ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಣದುಬ್ಬರ-ಜಿಎಸ್‌ ಟಿ ವಿರುದ್ಧ ರಸ್ತೆಗಿಳಿದ ಕಾಂಗ್ರೆಸ್‌: ರಾಹುಲ್-ಪ್ರಿಯಾಂಕಾ ಪೊಲೀಸ್‌ ವಶಕ್ಕೆ
    ರಾಷ್ಟ್ರೀಯ ಸುದ್ದಿ August 6, 2022

    ಹಣದುಬ್ಬರ-ಜಿಎಸ್‌ ಟಿ ವಿರುದ್ಧ ರಸ್ತೆಗಿಳಿದ ಕಾಂಗ್ರೆಸ್‌: ರಾಹುಲ್-ಪ್ರಿಯಾಂಕಾ ಪೊಲೀಸ್‌ ವಶಕ್ಕೆ

    By adminAugust 6, 2022No Comments2 Mins Read
    congress protest

    ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಮತ್ತು ಮೆರವಣಿಗೆ ನಡೆಸುತ್ತಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಸಂಸತ್ ಭವನ ಮತ್ತು ರಾಷ್ಟ್ರಪತಿ ಭವನದ ಕಡೆಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಜಾಥಾ ಹೊರಟಿದ್ದರು. ಈ ವೇಳೆ ದೆಹಲಿ ಪೊಲೀಸರು ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ದೆಹಲಿ ಪೊಲೀಸರ ಮೇಲೆ ಹಲ್ಲೆ ಆರೋಪ:

    ಕಸ್ಟಡಿಗೆ ತೆಗೆದುಕೊಳ್ಳುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಪಕ್ಷದ ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ನಾವು ದನಿ ಎತ್ತುತ್ತಿದ್ದೇವೆ. ಆದರೆ ಪೊಲೀಸರು ನಮಗೆ ಮುಂದುವರೆಯಲು ಅವಕಾಶ ನೀಡಲಿಲ್ಲ” ಎಂದು ಹೇಳಿದ್ದಾರೆ.

    “ಈ ಶಕ್ತಿಗಳನ್ನು ವಿರೋಧಿಸುವುದು ನಮ್ಮ ಕೆಲಸ. ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಮ್ಮ ಕೆಲಸ. ಹಣದುಬ್ಬರ ಮತ್ತು ನಿರುದ್ಯೋಗದಂತಹ ಜನರ ಸಮಸ್ಯೆಗಳನ್ನು ತೊಡೆದುಹಾಕುವುದು ನಮ್ಮ ಕೆಲಸ ಮತ್ತು ನಾವು ಅದನ್ನೇ ಮಾಡುತ್ತಿದ್ದೇವೆ” ಎಂದರು.

    ಸಂಸತ್ ಭವನದಿಂದ ಪಕ್ಷದ ಸಂಸದರ ಮೆರವಣಿಗೆ ಪ್ರಾರಂಭವಾಗುವ ಮೊದಲು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೆರವಣಿಗೆಯಲ್ಲಿ ಸ್ವಲ್ಪ ಸಮಯ ಭಾಗಿಯಾಗಿದ್ದರು. ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿ ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ ವಿಜಯ್ ಚೌಕ್‌ನಲ್ಲಿಯೇ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ತಡೆದಿದ್ದಾರೆ.

    ಇನ್ನು ಈ ಘಟನೆ ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಹಣದುಬ್ಬರ, ನಿರುದ್ಯೋಗ, ನೀತಿಗಳು ತಂದ ನಾಶದಿಂದ ಈ ಸರ್ವಾಧಿಕಾರಿ ಸರ್ಕಾರಕ್ಕೆ ಭಯವಾಗುತ್ತಿದೆ. ಸತ್ಯಕ್ಕೆ ಹೆದರುವವನು ಧ್ವನಿ ಎತ್ತುವವರಿಗೆ ಬೆದರಿಕೆ ಹಾಕುತ್ತಾನೆ” ಎಂದು ಹೇಳಿದ್ದಾರೆ.

    ಇನ್ನು ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿ, ‘ಇಂದು ಮತ್ತೊಮ್ಮೆ ಕಾಂಗ್ರೆಸ್ ಸಂಸದರಿಗೆ ಹಣದುಬ್ಬರ, ನಿರುದ್ಯೋಗ ಮತ್ತು ಜಿಎಸ್‌ಟಿ ವಿರುದ್ಧ ಪ್ರತಿಭಟಿಸುವ ಪ್ರಜಾಸತ್ತಾತ್ಮಕ ಹಕ್ಕನ್ನು ತಡೆಯಲಾಗಿದೆ. ವಿಜಯ್ ಚೌಕ್‌ ನಲ್ಲಿ ನಮ್ಮನ್ನು ಪೊಲೀಸ್ ವ್ಯಾನ್‌ನಲ್ಲಿ ತುಂಬಿಸಲಾಯಿತು. ಒಂದು ವಿಷಯ ಸ್ಪಷ್ಟವಾಗಿದೆ, ಭಯಪಡುವವರು ಮಾತ್ರ ಹೆದರಿಸಲು ಪ್ರಯತ್ನಿಸುತ್ತಾರೆ” ಎಂದು ಹೇಳಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    Comments are closed.

    Our Picks

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನಿಗೆ ಪೊಲೀಸ್ ನೋಟಿಸ್: ಹಿಂಪಡೆಯಲು ಎಸ್ಪಿಗೆ ಮನವಿ

    October 28, 2026

    ತುಮಕೂರು : ನಗರದ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತಕ್ಕೆ ‘ತುಮಕೂರು ಸ್ಕ್ವೇರ್’ ಎಂದು ಮರುನಾಮಕರಣ ಮಾಡುವ ಜಿಲ್ಲಾಡಳಿತದ ನಿರ್ಧಾರದ ಕುರಿತು…

    ಮರೇನಾಯಕನಹಳ್ಳಿಯಲ್ಲಿ ವೈಭವದ ವಾಲ್ಮೀಕಿ ಜಯಂತೋತ್ಸವ:   ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ಉದ್ಘಾಟನೆ; ಕುಂಭ-ಕಳಶ ಮೆರವಣಿಗೆ

    October 28, 2026

    ಮಧ್ಯರಾತ್ರಿ ನಾಯಿಗಳು ವಿಚಿತ್ರವಾಗಿ ಬೊಗಳುವುದೇಕೆ? ದೆವ್ವ ಕಾಣಿಸುತ್ತದೆಯೇ, ಇಲ್ಲಿದೆ ವೈಜ್ಞಾನಿಕ ಕಾರಣ!

    October 28, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.