ಕೊರಟಗೆರೆ: ತಾಲ್ಲೂಕಿನ ಚೀಲಗಾನಹಳ್ಳಿ ಗ್ರಾಮದ ಯುವಕ ಜುಲೈ 29 ರಂದು ಕಾಣೆಯಾಗಿದ್ದಾನೆ. ಗ್ರಾಮದ ಮಂಜುಳ ಶ್ರೀ ಕಂಠಯ್ಯನವರ ಮೊದಲನೇಯ ಮಗ ನಂದೀಶ್(23) ಕಾಣೆಯಾದ ಯುವಕನಾಗಿದ್ದಾನೆ.
ಜುಲೈ 29 ರ ಬೆಳಿಗ್ಗೆ ಕೊರಟಗೆರೆಯಲ್ಲಿ ತನ್ನ ತಂದೆ ನಡೆಸುತ್ತಿರುವ ಟೀ ಸ್ಟಾಲ್ ಗೆ ಹೋಗುವುದಾಗಿ ಹೇಳಿ, ತನ್ನ ತಂದೆಯ ಟೀ ಸ್ಟಾಲ್ ನಲ್ಲಿ ಟೀ ಕುಡಿದಿದ್ದಾನೆ. ಬಳಿಕ ಮನೆಗೆ ಹೋಗುವುದಾಗಿ ಹೇಳಿ ಹೋದ ಯುವಕ ಸಂಜೆಯಾದರು ಮನೆಗೆ ಹೊಂದಿರುವುದಿಲ್ಲ.
ನಂದೀಶ್ ರವರ ಎಡಗೈಯಲ್ಲಿ “ಅಮ್ಮ”ಎಂದು ಹಚ್ಚೆ ಗುರುತು ಇರುತ್ತದೆ. 5ಅಡಿ 6ಅಂಗುಲ ಎತ್ತರ, ಎಣ್ಣೆ ಕೆಂಪು ಬಣ್ಣ ಸಾಧಾರಣ ಮೈಕಟ್ಟು,ಮಾತು ಬರುವುದಿಲ್ಲ ಮೂಕ ಹಾಗೂ ಕಿವುಡನಾಗಿರುತ್ತಾನೆ. ಕಾಣೆಯಾದ ದಿನ ಹಳದಿ ಬಣ್ಣದ ಕೆಂಪು ಗೀರಿನ ರೇಡಿಮೇಡ್ ಶರ್ಟ್ ಸಿಮೆಂಟ್ ಬಣ್ಣದ ಬರ್ಮುಡಾ ಧರಿಸಿರುತ್ತಾನೆ.
ಈತನನ್ನು ಸಾರ್ವಜನಿಕ ಸ್ಥಳದಲ್ಲಿ ಹೋಟೆಲ್ ಗಳಲ್ಲಿ ಬಸ್ ಸ್ಟ್ಯಾಂಡ್ ಗಳಲ್ಲಿ ಅಥವಾ ಯಾವುದೇ ಟೀ ಸ್ಟಾಲ್ ಅಂಗಡಿಗಳ ಮುಂದೆ ನೋಡಿದವರು ಕೆಳಗಂಡ ನಂಬರ್ ಗಳಿಗೆ ಕರೆ ಮಾಡಿ ತಿಳಿಸಬೇಕೆಂದು ಅಥವಾ ತಾವೇ ಖುದ್ದು ಕುಟುಂಬಸ್ಥರ ಮುಂದೆ ಒಪ್ಪಿಸಿದ್ದಲ್ಲಿ 10,000 ರೂ. ನಗದು ಬಹುಮಾನವನ್ನು ನೀಡುವುದಾಗಿ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪ್ರಕರಣ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದು, ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಹತ್ತಿರದ ಠಾಣೆಗೆ ತಿಳಿಸುವುದು ಅಥವಾ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರವಾಣಿ ಸಂಖ್ಯೆ :-ಸಿಪಿಐ 9480802954 ಪಿಎಸ್ ಐ 9480802988, 9448561740, 7760494164 ಈ ಸಂಖ್ಯೆಗೆ ಕರೆ ಮಾಡಿ ತಿಳಿಸಲು ಕುಟುಂಬಸ್ಥರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz