ಶಿವಮೊಗ್ಗ: ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡ್ತೇನೆ, ಇಲ್ಲವಾದ್ರೆ ಇಲ್ಲ ಎಂದಿದ್ದಾರೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.
ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದಾರೆ, ನೀವೂ ಕೂಡ ನಿವೃತ್ತಿ ತಗೋತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಚುನಾವಣೆಗೆ ಸ್ಪರ್ಧಿಸುವ ವಿಚಾರವನ್ನು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು. ನಾನು ಮೊದಲು ಎಂಎಲ್‌ಎ ಆದಾಗಲೂ ನಾನೇ ಸ್ವಯಂ ಇಚ್ಛೆಯಿಂದ ಶಾಸಕನಾಗಿದ್ದಲ್ಲ. ಹಿರಿಯರೆಲ್ಲಾ ಕೂತು ನನ್ನನ್ನು ಆಯ್ಕೆ ಮಾಡಿದರು. ನಂತರ ಯುವ ಮೋರ್ಚಾ ರಾಜ್ಯಾಧ್ಯಕ್ಷ ಆಗಬೇಕು ಎಂದು ಹೇಳಿದರು. ನಾನು ಅದನ್ನೂ ನಿರ್ವಹಿಸಿದೆ. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷನಾಗಿಯೂ ಕೆಲಸ ಮಾಡಿದೆ. ನಂತರ ಅನೇಕ ಮಂತ್ರಿ ಪದವಿಗಳನ್ನ ನೋಡಿದ್ದೇನೆ, ಉಪ ಮುಖ್ಯಮಂತ್ರಿ ಕೂಡ ಆಗಿದ್ದೇನೆ. ಈಗಲೂ ಅಷ್ಟೇ ಪಕ್ಷ ಚುನಾವಣೆಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ ಇಲ್ಲದಿದ್ದರೆ ಇಲ್ಲ ಎಂದು ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಮಾಹಿತಿ ಇಲ್ಲ, ನಾನು ಪುನಃ ಮಂತ್ರಿಯಾಗ್ತೀನೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಕಳಂಕ ರಹಿತನಾಗಿದ್ದೇನೆ ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz