ತುಮಕೂರು: ಕೋಳಿ ಫಾರಂಗೆ ನೀರು ನುಗ್ಗಿದ ಪರಿಣಾಮ 35 ಸಾವಿರ ಕೋಳಿಗಳ ಮಾರಣಹೋಮ ನಡೆದಿರುವ ಘಟನೆ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಯಾಲದಹಳ್ಳಿಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ನಡುವೆ ನಾರಾಯಣಪ್ಪ ಎಂಬವರ 8 ಕೋಳಿ ಫಾರಂಗಳಿಗೆ ನೀರು ನುಗ್ಗಿದ್ದು, ಸುಮಾರು 35 ಸಾವಿರ ಕೋಳಿಗಳ ಮಾರಣಹೋಮ ನಡೆದಿದೆ.
ಘಟನೆ ಹಿನ್ನೆಲೆಯಲ್ಲಿ 80 ಲಕ್ಷ ರೂಪಾಯಿ ನಷ್ಟ ಸಂಭವಿಸಿದ್ದು, ಸಾಲ ಮಾಡಿ ಕೋಳಿ ಸಾಕಣಿಕೆಗೆ ಇಳಿದಿದ್ದ ನಾರಾಯಣಪ್ಪ ಇದೀಗ ಭಾರೀ ನಷ್ಟದಿಂದ ಕಂಗಾಲಾಗಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy