ದೇಶದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ ಆದರೂ ದಿನದ ಪಾಸಿಟಿವಿಟಿ ಪ್ರಮಾಣ ಶೇಕಡ ೬ರ ಗಡಿದಾಟಿದೆ.
ದೇಶದಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಹೊಸದಾಗಿ ೧೬,೧೬೭ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ಅವಧಿಯಲ್ಲಿ ಚೇತರಿಸಿಕೊಂಡು ಬಿಡುಗಡೆಯಾದವರ ಸಂಖ್ಯೆ ೧೫,೫೪೯ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕು ಸಂಖ್ಯೆಯ ಏರಿಳಿತದ ನಡುವೆಯೂ ಸೋಂಕಿನ ದಿನದ ಪಾಸಿಟಿವಿಟಿ ಪ್ರಮಾಣ ಶೇ. ೬,೧೪ ರಷ್ಟು ಇದೆ. ಜೊತೆಗೆ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ ೧,೩೫,೫೧೦ ಮಂದಿಯಲ್ಲಿ ಇದೆ ಎಂದು ಸಚಿವಾಲಯ ತಿಳಿಸಿದೆ.
ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿನ ಸಂಖ್ಯೆ ೪.೪೦ ಕೋಟಿ ಸನಿಹದಲ್ಲಿದೆ. ಅಲ್ಲದೆ ಇಲ್ಲಿಯತನಕ ಚೇತರಿಸಿಕೊಂಡು ಬಿಡುಗಡೆಯಾದವರ ಒಟ್ಟು ಸಂಖ್ಯೆ ೪,೩೪,೯೯,೬೫೯ ಮಂದಿಗೆ ಏರಿಕೆಯಾಗಿದೆ.ಜೊತೆಗೆ ಸೋಂಕಿನಿಂದ ೫,೨೬,೭೩೦ ಮಂದಿ ಸಾವನ್ನಪ್ಪಿದ್ದಾರೆ.
ಸೋಂಕು ಏರಿಳಿತ ಹಿನ್ನೆಲೆಯಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ ೧,೩೫,೫೧೦ ಮಂದಿಯಲ್ಲಿ ಇದೆ.ಜೊತೆಗೆ ಪಾಸಿಟಿವಿಟಿ ಪ್ರಮಾಣ ಶೇ.೦.೩೧ ರಷ್ಟು ಹಾಗು ವಾರದ ಸರಾಸರಿ ಪ್ರಮಾಣ ಶೇ.೪.೬೪ ರಷ್ಟು ಇದೆ ಎಂದು ಹೇಳಿದೆ.
ಇದೇ ವೇಳೆ ಒಟ್ಟಾರೆ ಚೇತರಿಕೆ ಪ್ರಮಾಣ ಶೇ.೯೮.೫೦ ರಷ್ಟು ಇದೆ ಎಂದು ಹೇಳಲಾಗಿದೆ. ಹೊಸದಾಗಿ ೩೪,೭೫,೩೩೦ ಡೋಸ್ ಲಸಿಕೆ ನೀಡಲಾಗಿದ್ದು ಇದುವರೆಗೆ ಒಟ್ಟಾರೆಯಾಗಿ ೨೦೬,೫೬ ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದೇ ಅವಧಿಯಲ್ಲಿ ೨,೬೩,೪೧೯ ಮಂದಿಗೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಮಾಡಿದ್ದು ಇಲ್ಲಿಯ ತನಕ ೮೭.೮೧ ಕೋಟಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz