ಮಹಾರಾಷ್ಟ್ರದ ಕಲ್ಲಿದ್ದಲು ನಿಕ್ಷೇಪ ಹಂಚಿಕೆಯಲ್ಲಿ ಅಕ್ರಮ ಸಾಬೀತಾದ ಹಿನ್ನೆಲೆಯಲ್ಲಿ ಕಲ್ಲಿದ್ದಲು ಇಲಾಖೆ ಕಾರ್ಯದರ್ಶಿ ಎಚ್ ಸಿ ಗುಪ್ತಾ ಅವರಿಗೆ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಕಲ್ಲಿದ್ದಲು ಹಗರಣದ ಪ್ರಕರಣದಲ್ಲಿ ಮಾಜಿ ಜಂಟಿ ಕಾರ್ಯದರ್ಶಿ ಕೆ.ಎಸ್. ಕ್ರೋಫಾ ಅವರಿಗೆ ಎರಡು ವರ್ಷ ಮತ್ತು ನಾಗ್ಪುರ ಮೂಲದ ಎಂ,ಎಸ್ ಗ್ರೇಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ನಿರ್ದೇಶಕ ಮುಖೇಶ್ ಗುಪ್ತಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ನ್ಯಾಯಾಲಯ ವಿಧಿಸಿದೆ.
ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್ ಶಿಕ್ಷೆಯ ತೀರ್ಪು ಪ್ರಕಟಿಸುವಾಗ ಎಚ್‌ಸಿ ಗುಪ್ತಾಗೆ ಒಂದು ಲಕ್ಷ ರೂಪಾಯಿ, ಕೆಎಸ್ ಕ್ರೋಫಾಗೆ ೫೦,೦೦೦ ರೂಪಾಯಿ, ಮುಖೇಶ್ ಗುಪ್ತಾಗೆ ೨ ಲಕ್ಷ ರೂಪಾಯಿ ಮತ್ತು ನಾಗ್ಪುರ ಮೂಲದ ಸಂಸ್ಥೆಗೆ ೨ ಲಕ್ಷ ರೂಪಾಯಿ ದಂಡ ವಿಧಿಸಿದೆ. ಮಿಸ್ಸಸ್ ಗ್ರೇಸ್ ಇಂಡಸ್ಟ್ರೀಸ್ ಲಿಮಿಟೆಡ್ ಗೆ ದಂಡ ವಿಧಿಸಿದೆ.
ಮಹಾರಾಷ್ಟ್ರದ ಲೋಹರಾ ಪೂರ್ವ ಕಲ್ಲಿದ್ದಲು ನಿಕ್ಷೇಪ ಹಂಚಿಕೆಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ನ್ಯಾಯಾಲಯ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz