nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
    • ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
    • RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
    • ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
    • ತುಮಕೂರಿಗೆ ಏರ್‌ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ಆರ್ಭಟ ವಾರದಲ್ಲಿ 34 ಮಂದಿ ಸಾವು
    ರಾಜ್ಯ ಸುದ್ದಿ August 9, 2022

    ಮಳೆ ಆರ್ಭಟ ವಾರದಲ್ಲಿ 34 ಮಂದಿ ಸಾವು

    By adminAugust 9, 2022No Comments2 Mins Read
    rain

    ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಮುಂದುವರಿದಿದ್ದು ಇದುವರೆಗೂ ಒಂದು ವಾರದ ಅವಧಿಯಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ ೩೪ಕ್ಕೆ ಏರಿದೆ. ಅಪಾರ ಆಸ್ತಿಪಾಸ್ತಿ ಹಾನಿಗೀಡಾಗಿ ಅನ್ನದಾತರ ಬದುಕು ದುಸ್ಥರವಾಗಿದೆ. ಎಡೆಬಿಡದೆ ಸುರಿದ ಮಳೆಯಿಂದಾಗಿ ಬೆಳೆದಿದ್ದ ಬೆಳೆಗಳು ನೀರು ಪಾಲಾಗಿವೆ. ಇನ್ನು ಮೂರು ದಿನಗಳ ಕಾಲ ರಾಜ್ಯದ 11  ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಎಚ್ಚರಿಕೆ ಸಂದೇಶ ರವಾನಿಸಿದೆ.

    ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಪ್ರವಾಹ ಮಾತ್ರ ಕಡಿಮೆಯಾಗಿಲ್ಲ. ಇದರಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
    ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಕೆಆರ್‌ಎಸ್ ಜಲಾಶಯ ತುಂಬಿ ಹರಿಯುತ್ತಿದ್ದು, ೧ ಲಕ್ಷ ಕ್ಯೂಸೆಕ್ಸ್ ಗೂ ಹೆಚ್ಚು ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದಾಗಿ ನದಿ ಪಾತ್ರದ ಆಸುಪಾಸಿನ ಗ್ರಾಮಗಳು ಜಲಾವೃತಗೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಕಾವೇರಿ ನದಿ ಪ್ರವಾಹದಿಂದಾಗಿ ಶವಸಂಸ್ಕಾರಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
    ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದಲ್ಲಿ ಕ್ಯಾನ್ಸರ್ ನಿಂದ ಮೃತಪಟ್ಟಿದ್ದ ಸುಲೋಚನರವರ ಶವವನ್ನು ನೀರಿನಲ್ಲೇ ಗ್ರಾಮಸ್ಥರು ಶವಹೊತ್ತು ಮಸಣಕ್ಕೆ ತೆರಳಿ ಅಂತ್ಯಕ್ರಿಯೆ ನಡೆಸಿದ್ದಾರೆ.

    ಕಾವೇರಿ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ಜಮೀನಿಗಳಿಗೆ ನೀರು ನುಗ್ಗಿದೆ. ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದಿರುವ ಘಟನೆ ಸಂಭವಿಸಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಅಂಗನವಾಡಿ ಹಾಗೂ ಪ್ರೌಢಶಾಲೆಗೆ ರಜೆ ಘೋಷಿಸಲಾಗಿದೆ.

    ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ವರುಣ ಅರ್ಭಟ ಮುಂದುವರಿದಿದ್ದು, ಮನೆಯ ಗೋಡೆ ಕುಸಿದು ಬಿದ್ದಿದೆ. ಗೋಡೆ ಕುಸಿಯುವಾಗಲೇ ಹೊರಗೆ ಓಡಿ ಬಂದು ನಾಲ್ವರು ಪ್ರಾಣ ಉಳಿಸಿಕೊಂಡಿದ್ದಾರೆ. ವಡಗಾವಿಯಲ್ಲಿರುವ ರಂಜಿತ್ ಚವ್ಹಾಣ್ ಎಂಬುವರಿಗೆ ಈ ಮನೆ ಸೇರಿದೆ. ಗೋಡೆ ಕುಸಿತದಿಂದಾಗಿ ಮನೆಯಲ್ಲಿ ಸಾಮಾಗ್ರಿಗಳು ಮಣ್ಣು ಪಾಲಾಗಿದ್ದು ಕುಟುಂಬ ಬೀದಿಗೆ ಬಿದ್ದಿದೆ. ಬಾಗಲಕೋಟೆ ಜಿಲ್ಲೆಯಲ್ಲೂ ನಿರತರ ಮಳೆಯಿಂದಾಗಿ ಸಾರ್ವಜನಿಕರು ಮನೆಯಿಂದ ಹೊರಬರುತ್ತಿಲ್ಲ. ಜಿಟಿ ಜಿಟಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

    ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಭೂ ಕುಸಿತದ ಆತಂಕ ಎದುರಾಗಿದೆ. ಸ್ಥಳಕ್ಕೆ ಗಣಿ, ಕಂದಾಯ ಇಲಾಖೆಯ ನೋಡಲ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೂಕುಸಿತದ ಪ್ರದೇಶದಲ್ಲಿದ್ದ ಕುಟುಂಬಸ್ಥರನ್ನ ಕಾಳಜಿ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.

    ವಿಜಯನಗರ ಜಿಲ್ಲೆಯಲ್ಲಿ ತುಂಗಭದ್ರಾ ಜಲಾಶಯದಿಂದ ೧ ಲಕ್ಷ ೧೦ ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಇದರಿಂದಾಗಿ ಹಂಪಿಯ ಹಲವು ಸ್ಮಾರಕಗಳು ಜಲಾವೃತವಾಗಿವೆ. ಪುರಂದರದಾಸರ ಮಂಟಪ, ಸಾಲು ಮಂಟಪ, ಜಲಾವೃತವಾಗಿದೆ.
    ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ೨ ದಿನ ವ್ಯಾಪಕ ಮಳೆಯಾಗಿದ್ದು, ಉಳಿದೆಡೆ ಸಾಧಾರಣ ಮಳೆ ಬೀಳಲಿದೆ. ನಂತರದ ದಿನಗಳಲ್ಲಿ ಮಳೆಯು ಉತ್ತರ ಭಾರತದತ್ತ ಹೊರಳಲಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.

    ಈಗಾಗಲೇ ಮುಂಗಾರು ಆರ್ಭಟ ತುಸು ಕಡಿಮೆಯಾಗುತ್ತಿದೆ. ಮುಂದಿನ ೨ ರಿಂದ ೩ ದಿನ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, ನಂತರದ ದಿನದಲ್ಲಿ ಉತ್ತರ ಭಾರತದತ್ತ ಮುಂಗಾರು ಚಲಿಸಲಿದ್ದು ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.ಮಳೆಗಾಲ ಆಗಿರುವುದರಿಂದ ಕೆಲ ದಿನಗಳ ಬಳಿಕ ಮತ್ತೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

    ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾನುವಾರ ರೆಡ್‌ಅಲರ್ಟ್‌ಘೋಷಿಸಲಾಗಿತ್ತು. ಹಾಸನ, ಯಾದಗಿರಿ, ಕಲಬುರಗಿ, ಬೀದರ್‌ಜಿಲ್ಲೆಗಳಿಗೆ ಆರೆಂಜ್‌ಹಾಗೂ ಬೆಳಗಾವಿ, ರಾಯಚೂರು, ವಿಜಯಪುರ, ಚಾಮರಾಜನಗರ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಿಗೆ ಯಲ್ಲೊ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

    ರಾಜ್ಯದಲ್ಲಿ ಇಂದಿನಿಂದ ಮಳೆಯ ಅಬ್ಬರ ತುಸು ತಗ್ಗುವ ಲಕ್ಷಣಗಳಿವೆ. ಆದರೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ಬುಧವಾರದವರೆಗೆ ಆರೆಂಜ್ ಅಲರ್ಟ್ ಇರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಬುಧವಾರದವರೆಗೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!

    August 16, 2026

    ತುಮಕೂರು: ಜಿಲ್ಲೆಯ ನಿವಾಸಿಗಳ ದಶಕಗಳ ಕನಸಾದ ‘ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ’ ನನಸಾಗುವ ಹೊಸ್ತಿಲಿಗೆ ಬಂದು ತಲುಪಿದೆ. ಯೋಜನೆಯ ಸುದೀರ್ಘ…

    ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ

    August 16, 2026

    RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

    August 16, 2026

    ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ

    August 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.