ಪಶ್ಚಿಮ ಬಂಗಾಳದಲ್ಲಿ ಭೀಕರ ಅಪಘಾತವೊಂದು ತಪ್ಪಿದೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಕಸ್ಮಿಕವಾಗಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ. ಎಲ್ಲರೂ ಅಪಾಯದಿಂದ ಪಾರಾಗಿದ್ದರಿಂದ ದೊಡ್ಡ ಅಪಘಾತ ಸ್ವಲ್ಪದರಲ್ಲೇ ತಪ್ಪಿದೆ. ಹೌರಾ ಜಿಲ್ಲೆಯ ಬಗ್ನಾನ್‌ನಲ್ಲಿ ಸೋಮವಾರ ಮುಂಜಾನೆ ಈ ಘಟನೆ ನಡೆದಿದೆ.
ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ. ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 16ರಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಿಘಾಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದ ಸಮಯದಲ್ಲಿ ಸುಮಾರು 70 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಆದರೆ, ಬಸ್ ಪಲ್ಟಿಯಾಗಲು ಕಾರಣ ತಿಳಿದುಬಂದಿಲ್ಲ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy