nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯನ್ನು ತುಳಿದು ಕೊಂದ ಒಂಟಿ ಸಲಗ
    Uncategorized August 10, 2022

    ಮಹಿಳೆಯನ್ನು ತುಳಿದು ಕೊಂದ ಒಂಟಿ ಸಲಗ

    By adminAugust 10, 2022No Comments1 Min Read
    death

    Provided by
    Provided by

    ಬೆಳ್ಳಂಬೆಳಗ್ಗೆ ಒಂಟಿ ಸಲಗವೊಂದು ಮಹಿಳೆ ಮೇಲೆ ದಾಳಿ ಮಾಡಿ ತುಳಿದು ಸಾಯಿಸಿರುವ ಘಟನೆ ಚೆನ್ನಮ್ಮನ ಹೊಸ ಹಳ್ಳಿ ಬಳಿ ನಡೆದಿದೆ. ಸಿದ್ದಪ್ಪಾಜಿ ದೇವಾಲಯ ಅರ್ಚಕ ಚೆನ್ನಪ್ಪ ಅವರ ಪತ್ನಿ ಚೆನ್ನಮ್ಮ(65) ಆನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ಮಹಿಳೆ.

    ಎಂದಿನಂತೆ ಇಂದು ಬೆಳಗಿನ ಜಾವ 5.30ರ ಸುಮಾರಿನಲ್ಲಿ ಚೆನ್ನಮ್ಮ ಅವರು ತೋಟಕ್ಕೆ ಹೋಗಿ ಹಸುವಿನ ಹಾಲು ಕರೆಯುತ್ತಿದ್ದಾಗ ಏಕಾಏಕಿ ಅವರ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿ ತುಳಿದಿದೆ. ಮಹಿಳೆಯ ಕೂಗಾಟ, ಚೀರಾಟ ಕೇಳಿ ಅಕ್ಕ-ಪಕ್ಕದವರು ಸ್ಥಳಕ್ಕೆ ಬಂದು ಆನೆಯನ್ನು ಓಡಿಸುವಷ್ಟರೊಳಗೆ ಚೆನ್ನಮ್ಮ ಮೃತಪಟ್ಟಿದ್ದರು.

    ಆನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವ ವಿಷಯ ತಿಳಿದು ಸುತ್ತ-ಮುತ್ತಲ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದರು. ಮಹಿಳೆಯ ಕುಟುಂಬಸ್ಥರ ರೋದನ ಹೇಳತೀರದಾಗಿತ್ತು. ಸುದ್ದಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದಾಗ ಗ್ರಾಮಸ್ಥರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಭರವಸೆಯಾಗಿಯೇ ಉಳಿದ ಆಶ್ವಾಸನೆ: ಕಳೆದ ಐದು ವರ್ಷಗಳಿಂದಲೂ ಆನೆಗಳ ಉಪಟಳದಿಂದ ಇದುವರೆಗೂ ಲಕ್ಷಾಂತರ ರೂ. ಬೆಲೆ ಹಾನಿಯಾಗಿ ರೈತರು ಕಂಗಾಲಾಗಿದ್ದಾರೆ. 10ರಿಂದ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಅರಣ್ಯ ಇಲಾಖೆ ಆನೆಗಳನ್ನು ಸ್ಥಳಾಂತರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ನೀಡಿದ ಭರವಸೆ ಆಶ್ವಾಸನೆಯಾಗಿಯೇ ಉಳಿದಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎಚ್‍ಡಿಕೆ ಚರ್ಚೆ: ಕಳೆದ ಎರಡು ದಿನಗಳಿಂದ ಅಷ್ಟೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಗ್ರಾಮಕ್ಕೆ ಭೇಟಿ ನೀಡಿ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳ ಜೊತೆ ಆನೆ ಸ್ಥಳಾಂತರ ಸಂಬಂಧ ಮಾತುಕತೆ ನಡೆಸಿದ್ದರು.

    ಆನೆಗಳ ನಿಯಂತ್ರಣಕ್ಕೆ ರೈಲ್ವೆ ಬ್ಯಾರಿಕೇಡ್ ಒಂದೇ ಮಾರ್ಗ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಅರಣ್ಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳಲಾಗದ ಕಾರಣ ಇಂದು ಮಹಿಳೆ ಪ್ರಾಣ ಕಳೆದುಕೊಳ್ಳುವಂತಾಯಿತು ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ–ಪೌತಿ ಖಾತಾ ಆಂದೋಲನ–2…

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.