ಮಧುಗಿರಿ: ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಂಡವಾಡಿ ರಸ್ತೆ ಬಳಿಯಲ್ಲಿ ನಡೆದಿದೆ.
ತಾಲೂಕಿನ ಪುರವಾರ ಹೋಬಳಿಯ ತಿಮ್ಮಪ್ಪ ನವರ ಮಗನಾದ ರೇಣುಕಣ ( 22 ) ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ಗುರುತಿಸಲಾಗಿದೆ. ಪೆಟ್ರೋಲ್ ಮೈಗೆ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದ ಈತ ಬೆಂಕಿಯ ಉರಿ ತಾಳಲಾರದೇ ಕಿರುಚಾಡಿದ್ದಾನೆ.
ಈ ವೇಳೆ ಸಾರ್ವಜನಿಕರು ತಕ್ಷಣವೇ ತಾಲೂಕಿನ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶಿವಕುಮಾರ್ ರವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಶಿವಕುಮಾರ್ ಘಟನಾ ಸ್ಥಳಕ್ಕೆ ಆಗಮಿಸಿ ಉಚಿತ ಸೇವೆಯಲ್ಲಿರುವ ರಕ್ಷಣಾ ವೇದಿಕೆ ಆಂಬುಲೆನ್ಸ್ ನಲ್ಲಿ ಗಾಯಗೊಂಡ ಯುವಕನನ್ನು ಚಿಕಿತ್ಸೆಗೆ ಮಧುಗಿರಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿರುತ್ತಾರೆ.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz