ಕೋಲ್ಕತ್ತಾ: ಬಂಗಾಳದ ಆಡಳಿತಾರೂಢ ತೃಣಮೂಲ ನಾಯಕರನ್ನೇ ಟಾರ್ಗೆಟ್ ಮಾಡಿರುವ ಇಡಿ ಇದೀಗ ಐಪಿಎಸ್ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿದೆ. ಗುರುವಾರ ಎಂಟು ಐಪಿಎಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಜ್ಞಾನವಂತ್ ಸಿಂಗ್ (ಎಡಿಜಿ, ಸಿಐಡಿ), ಕೋಟೇಶ್ವರ ರಾವ್, ಎಸ್ ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್ ಮತ್ತು ತಥಾಗತ ಬಸು ನೋಟಿಸ್ ಪಡೆದವರಲ್ಲಿ ಸೇರಿದ್ದಾರೆ. ಕಳೆದ ವರ್ಷವೂ ನೋಟಿಸ್ ಪಡೆದ 8 ಅಧಿಕಾರಿಗಳ ಪೈಕಿ ಏಳು ಮಂದಿಗೆ ಇಡಿ ನೋಟಿಸ್ ಜಾರಿ ಮಾಡಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz