ಬೆಂಗಳೂರು : ರಾಜ್ಯದಲ್ಲಿ ಸದ್ಯ ಚರ್ಚಿತ ವಿಷಯ ಎಂದರೆ ಹೈಕೋರ್ಟ್ ಎಸಿಬಿ ಸಂಸ್ಥೆ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿ ಆದೇಶ ನೀಡಿದೆ. 2016 ರಲ್ಲಿ ಸಿದ್ದರಾಮಯ್ಯ ಸರ್ಕಾರವಿದ್ದಾಗ ಎಸಿಬಿ ಸಂಸ್ಥೆ ರಚನೆಯಾಗಿತ್ತು.
ಈಗ ಕೋರ್ಟ್ ಕೊಟ್ಟಿರುವ ತೀರ್ಪು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡಿದೆ. ಇಷ್ಟು ದಿನ ಆಟಕ್ಕೂಂಟು ಲೆಕ್ಕಕ್ಕಿಲ್ಲ ಎನ್ನುವಂತಿದ್ದ ಲೋಕಾಯುಕ್ತದಲ್ಲಿ ಬಾಕಿಯಿರುವ ಪ್ರಕರಣಗಳು ಸಾಕಷ್ಟಿವೆ. ಒಟ್ಟು 8,036 ಪ್ರಕರಣಗಳು ಲೋಕಾಯುಕ್ತದಲ್ಲಿ ಬಾಕಿ ಇವೆ. ಇದರಲ್ಲಿ 2,430 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ.
ಗಂಭೀರವಲ್ಲದ 13 ಸಾವಿರ ಪ್ರಕರಣಗಳು ಲೋಕಾಯುಕ್ತದಲ್ಲಿ ದಾಖಲಾಗಿವೆ. ಈ ಪೈಕಿ 12 ಸಾವಿರ ಪ್ರಕರಣಗಳು ಇತ್ಯರ್ಥವಾಗಿವೆ.
2017 ರಿಂದ ಇಲ್ಲಿಯವರೆಗೂ ಅಂದರೆ ಐದು ವರ್ಷದಲ್ಲಿ 20,549 ಪ್ರಕರಣ ದಾಖಲಾಗಿವೆ. ಇದರಲ್ಲಿ 2, 431 ಪ್ರಕರಣಗಳನ್ನ ಇತ್ಯರ್ಥಪಡಿಸಲಾಗಿದೆ. ಇದರಲ್ಲಿ 304 ಸ್ವಯಂ ಪ್ರೇರಿತ ದೂರನ್ನ ಲೋಕಾಯುಕ್ತ ದಾಖಲಿಸಿಕೊಂಡಿದೆ. ಒಟ್ಟಾರೆಯಾಗಿ ಈ ಎಲ್ಲಾ ಪ್ರಕರಣಗಳ ಜೊತೆ ಹೈಕೋರ್ಟ್ ಆದೇಶ ನೀಡಿರುವಂತೆ ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಬೇಕೆಂದು ಆದೇಶಿಸಿದೆ. ಹೀಗಾಗಿ ಲೋಕಾಯುಕ್ತದಲ್ಲಿ ಪ್ರಕರಣಗಳು ಸಂಖ್ಯೆಯು ಸಹ ಹೆಚ್ಚಾಗಲಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy