ತುಮಕೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ-ಪರಿಸರ ಸಂರಕ್ಷಣಾ ಪಡೆಯಿಂದ ತುಮಕೂರಿನಲ್ಲಿ ದೇಶಕ್ಕಾಗಿ ಮಹಾ ನಡಿಗೆ ಕಾರ್ಯಕ್ರಮ ನಡೆಯಿತು.
ಸುಮಾರು 3 ಸಾವಿರಕ್ಕೂ ಹೆಚ್ಚು ಜನರಿಂದ ರಾಷ್ಟ್ರಧ್ವಜ ಹಿಡಿದು ವಾಕಥಾನ್ ನಡೆಯಿತು. ಜೂನಿಯರ್ ಕಾಲೇಜು ಮೈದಾನದಿಂದ ಆರಂಭಗೊಂಡ ನಡಿಗೆ. ಟೌನ್ ಹಾಲ್ ವೃತ್ತ, ಸ್ವಾತಂತ್ರ್ಯ ಚೌಕದ ಮೂಲಕ ಗಾಜಿನ ಮನೆವರೆಗೂ ಸಾಗಿತು.
ವಾಕಥಾನಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಎಸ್ಪಿ ರಾಹುಲ್ ಕುಮಾರ್, ಶಾಸಕ ಜಿ.ಬಿ.ಜ್ಯೋತಿಗಣೇಶ್, ಕಿರುತೆರೆ ನಟಿ ಚಂದನಾ ಭಾಗಿಯಾಗಿದ್ದರು.
ಗಾಜಿನ ಮನೆಯಲ್ಲಿ ಸಮಾರಂಭ ನಡೆಯಲಿದ್ದು, ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಉಪಸ್ಥಿತರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz