ಹಿರಿಯೂರು: ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಆಯೋಜಿಸಲಾದ ತಿರಂಗಾ ಜಾಥಾಕ್ಕೆ ತಾಲ್ಲೂಕು ತಹಶೀಲ್ದಾರ್ ಪ್ರಶಾಂತ ಕೆ. ಪಾಟೀಲ ಚಾಲನೆ ನೀಡಿದರು.
ಈ ವೇಳೆ ನಮ್ಮತುಮಕೂರು ಜೊತೆಗೆ ಮಾತನಾಡಿದ ಪ್ರಶಾಂತ ಕೆ. ಪಾಟೀಲ, ಇದೀಗ ನಮ್ಮ ದೇಶದ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಮನೆಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ 75 ನೇ ಅಮೃತಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಹಿರಿಯೂರು ತಾಲ್ಲೂಕಿನಲ್ಲಿ 1,000 ಅಡಿ ಧ್ವಜವನ್ನು ಯಾತ್ರೆಯ ಮುಖಾಂತರ ಪ್ರದರ್ಶಿಸಿ ಯಾತ್ರೆಯನ್ನು ಆಯೋಜಿಸಿರುವ ಕರ್ನಾಟಕ ರಕ್ಷಣಾ ವೇದಿಕೆಗೆ ತಹಶೀಲ್ದಾರರು ಇದೇ ವೇಳೆ ಅಭಿನಂದನೆ ತಿಳಿಸಿದರು.
ಹಿರಿಯೂರು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ನಾಗಭೂಷಣ್ ಮಾತನಾಡಿ, ತಿರಂಗ ಯಾತ್ರೆಯನ್ನು ಯಶಸ್ವಿಗೊಳಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಹಾಗೂ ತಾಲ್ಲೂಕು ಮುಖಂಡರುಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಟಿ.ರಮೇಶ್ ಹಾಗೂ ತಾಲ್ಲೂಕು ಗೌರವ ಅಧ್ಯಕ್ಷರಾದ ಗೋ ಬಸವರಾಜು ಅವರು ಮಾತನಾಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಉದಯಶಂಕರ್ ರವರು ವಹಿಸಿದ್ದರು. ಹಿರಿಯೂರು ತಾಲ್ಲೂಕಿನ ತಾಲ್ಲೂಕು ತಹಶೀಲ್ದಾರರಾದ ಪ್ರಶಾಂತ ಕೆ.ಪಾಟೀಲ, ಶಿಕ್ಷಣ ಅಧಿಕಾರಿ ನಾಗಭೂಷಣ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಟಿ. ರಮೇಶ್, ಉಪಾಧ್ಯಕ್ಷರಾದ ತಿಮ್ಮರಾಜು, ತಾಲ್ಲೂಕು ಗೌರವ ಅಧ್ಯಕ್ಷರಾದ ಗೋ ಬಸವರಾಜು, ತಾಲ್ಲೂಕು ಉಪಾಧ್ಯಕ್ಷರಾದ ರಾಮಕೃಷ್ಣಪ್ಪ, ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾದ ಡಿ ಕೆ ಎಸ್ ದಾದಾಪೀರ್ , ತಾಲ್ಲೂಕು ಕಾರ್ಯದರ್ಶಿ ಗಿರೀಶ್, ನಗರ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸುಹೇಲ್ , ನಗರ ಕಾರ್ಯದರ್ಶಿ ರೆಹಮತ್ , ಜಾಮಿಯ ಸರ್ಕಲ್ ಘಟಕ ಅಧ್ಯಕ್ಷರಾದ ಜಾಫರ್, ಸೇರಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಪದಾದಿಕಾರಿಗಳು ಗಿರೀಶ ಸ್ಕೂಲ್ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ,ಪೋಲಿಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ : ಮುರುಳಿಧರನ್ ಆರ್ . ಚಿತ್ರದುರ್ಗ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


