ತುರುವೇಕೆರೆ: ತಾಲ್ಲೂಕು ಆಡಳಿತದ ವತಿಯಿಂದ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೇಣು ಕುಮಾರ್ ರವರು ಧ್ವಜಾರೋಹಣ ನೆರವೇರಿಸಿ ತಾಲೂಕಿನ ಜನತೆಗೆ ಸ್ವಾತಂತ್ರೋತ್ಸವದ ಶುಭಾಶಯ ಕೋರಿದರು.
ಇದೇ ವೇಳೆ ವಿವಿಧ ಶಾಲಾ ಮಕ್ಕಳಿಂದ ಪಥಸಂಚಲನ, ಪೋಲಿಸ್ ಇಲಾಖೆಯಿಂದ ಕವಾಯತು, ಗೃಹರಕ್ಷಕ ದಳದಿಂದ ಪಥಸಂಚಲನ ನಡೆಯಿತು.
ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಸಾಲ ಜಯರಾಮ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಪಥ ಸಂಚಲ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ತಹಸಿಲ್ದಾರರು ವಂದನೆ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ರಾಜಕೀಯದ ಗಣ್ಯರು ಶಿಕ್ಷಕರು ಮಕ್ಕಳು ಪಾಲ್ಗೊಂಡಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy