ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಡಿ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ 75 ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ. ರಮೇಶ್ ಬಳಿಕ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ, ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ನಗರದಲ್ಲಿ ಅಮೃತ ಮಹೋತ್ಸವ ಪಾದಯಾತ್ರೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸಿದೆ. ಹಿರಿಯೂರು ತಾಲ್ಲೂಕಿನಲ್ಲಿ ಸಹ ನೂರು ಕಿಲೋಮೀಟರ್ ಗಳ ಪಾದಯಾತ್ರೆ ಯನ್ನು ಮುಕ್ತಾಯಗೊಳಿಸಿದ್ದೇವೆ . ಈ ದಿನ ಭಾರತವು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯವನ್ನು ಪಡೆಯಿತು. ಪ್ಲಾಸಿಯ ಕದನದಲ್ಲಿ ಬ್ರಿಟಿಷರ ವಿಜಯದ ನಂತರ, ಈಸ್ಟ್ ಇಂಡಿಯಾ ಕಂಪನಿಯು 1757ರಲ್ಲಿ ಭಾರತದಲ್ಲಿ ತನ್ನ ಆಡಳಿತವನ್ನು ಆರಂಭಿಸಿತು. ಭಾರತೀಯ ಸ್ವಾತಂತ್ರ್ಯ ಚಳುವಳಿಯು ಮೊದಲನೆಯ ಮಹಾಯುದ್ಧದ ಸಮಯದಲ್ಲಿ ಪ್ರಾರಂಭವಾಯಿತು ಮತ್ತು ಮೋಹನ್ ದಾಸ್ ಕರಮದಾಸ್ ಗಾಂಧಿ ನೇತೃತ್ವದಲ್ಲಿ ನಡೆಯಿತು. ಆಗಸ್ಟ್ 15, 1947 ರಂದು, ಭಾರತವು ತನ್ನ ಸ್ವಾತಂತ್ರ್ಯವನ್ನು ಪಡೆಯಿತು, ಸುಮಾರು 200 ವರ್ಷಗಳ ಬ್ರಿಟಿಷ್ ಆಡಳಿತವನ್ನು ಕೊನೆಗೊಳಿಸಿತು ಎಂದು ತಿಳಿಸಿದರು.
ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಅವರು ಆಗಸ್ಟ್ 15, 1947 ರಂದು ದೆಹಲಿಯ ಕೆಂಪು ಕೋಟೆಯ ಲಾಹೋರಿ ಗೇಟ್ ಮೇಲೆ ಭಾರತೀಯ ರಾಷ್ಟ್ರಧ್ವಜವನ್ನು ಹಾರಿಸಿದರು. ಅಂದಿನಿಂದ ಇಂದಿನವರೆಗೂ ಈ ಸಂಪ್ರದಾಯವನ್ನು ಅನುಸರಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿರಿಗನ್ನಡ ನಾಡು ಕಟ್ಟಡ ಸಂಘ ವತಿಯಿಂದ ಬೈಕ್ ರಾಲಿಯನ್ನು ಹಾಗೂ ಕಟ್ಟಡ ಕಾರ್ಮಿಕರ ಪೈಂಟರ್ ಸಂಘದ ವತಿಯಿಂದಲೂ ಸ್ವಾತಂತ್ರ್ಯ ಮಹೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈರಲಿಂಗೆ ಗೌಡ, ಕೆಪಿಸಿಸಿ ಸದಸ್ಯರಾದ ಅಮೃತೇಶ್ವರ ಸ್ವಾಮಿ, ಸುರೇಶ್ ಬಾಬು, ನಗರಸಭೆ ಅಧ್ಯಕ್ಷರಾದ ಶಿವರಂಜಿನಿ, ಮಾಜಿ ಉಪಾಧ್ಯಕ್ಷರಾದ ಪ್ರಕಾಶ್ ಬಿ.ಎನ್., ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ಪ್ರಚಾರ ಸಮಿತಿ ಅಧ್ಯಕ್ಷರಾದ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾ ಮಣಿ, ಮಾಜಿ ತಾ.ಪಂ. ಅಧ್ಯಕ್ಷರಾದ ಚೆಂದ್ರಪ್ಪ ಹಾಗೂ ಅಸಂಘಟಿತ ಕಾರ್ಮಿಕ ಅಧ್ಯಕ್ಷರಾದ ಶಿವಕುಮಾರ್, ಕಾರ್ಮಿಕ ಘಟಕದ ಅಧ್ಯಕ್ಷರಾದ ದಾದಾಪೀರ್, ಉಪಾಧ್ಯಕ್ಷರಾದ ಜ್ಞಾನೇಶ್, ನಗರಸಭಾ ಸದಸ್ಯರಾದ ಮಮತಾ, ಗೀತಾ, ವಿಶಾಲಾಕ್ಷಮ್ಮ, ಕವಿತಾ, ಮೊದಲ ಮೇರಿಯ, ರತ್ನಮ್ಮ, ಈನಾ, ರಜಿಯಾ ಸುಲ್ತಾನ, ಅಶ್ರಫ್, ಶಕುಂತಲಮ್ಮ, ವಾಣಿ, ಯುವ ಕಾಂಗ್ರೆಸ್ ಶ್ರೀನಿವಾಸ್, ಇಮ್ರಾನ್, ಎಸ್. ಸಿ.ಘಟಕದ ಅಧ್ಯಕ್ಷ ಜಿ.ಎಲ್.ಮೂರ್ತಿ, ಈಶ್ವರ್, ವಿನಯ್, ಅಣ್ಣೀಶ್, ಮಣಿ, ಲಿಂಗರಾಜು, ಕಟ್ಟಡ ಕಾರ್ಮಿಕರ ಸಂಘದ ಮುಕುಂದ, ಕೆಂಚಪ್ಪ ಸೇರಿದಂತೆ ಇನ್ನು ಹಲವಾರು ಮುಖಂಡರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy