ತುಮಕೂರು ನಗರದ ಅಶೋಕ ರಸ್ತೆಯಲ್ಲಿನ ಎಂಪ್ರೆಸ್ ಕಾಲೇಜಿನ ಮುಂಭಾಗ ಅಳವಡಿಸಲಾಗಿದ್ದ ವೀರ ಸಾವರ್ಕರ್ ರವರ ಭಾವಚಿತ್ರವಿರುವ ಫ್ಲೆಕ್ಸ್ ಹರಿದುಹಾಕಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಎಸ್.ಪಿ. ರಾಹುಲ್ ಕುಮಾರ್ ಶಹಪುರ್ವಾಡ ತಿಳಿಸಿದ್ದಾರೆ.
ಅವರು ಈ ಸಂಬಂಧ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಗರದ ಅಶೋಕ ರಸ್ತೆಯ ಎಂಪ್ರೆಸ್ ಕಾಲೇಜ್ ಮುಂಭಾಗ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವ ಫ್ಲೆಕ್ಸ್ ನಲ್ಲಿ ಅಳವಡಿಸಲಾಗಿದ್ದ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದು ಇದು ಜನರನ್ನು ಪ್ರಚೋದನೆಗೊಳಿಸುವ ತಂತ್ರವಾಗಿದೆ. ಈಗಾಗಲೇ ಇದರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಪ್ರಾರಂಭಿಸಲಾಗಿದೆ. ಈ ರೀತಿಯಾದೆ. ಈ ರೀತಿಯಾದ ಪ್ರಚೋದನಕಾರಿ ಕೃತ್ಯಗಳಿಂದ ಸಾರ್ವಜನಿಕರು ಪ್ರಚೋದನೆಗೊಳಗಾಗದೆ ಶಾಂತಿಯನ್ನು ಕಾಪಾಡಬೇಕು. ಒಂದು ವೇಳೆ ಪ್ರಚೋದನೆಗೊಳಗಾದರೆ ಪ್ರಚೋದಿತ ವ್ಯಕ್ತಿಗಳ ಪ್ರಯತ್ನ ಸಫಲವಾದಂತಾಗುತ್ತದೆ ಆದ್ದರಿಂದ ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿರ್ವಹಿಸುತ್ತದೆ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸವನ್ನು ಮಾಡುತ್ತದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಅವರು ನಗರದಲ್ಲಿ ಶಾಂತಿಯನ್ನು ಕಾಪಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz