ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಳೇ ಕಡಲೆಕಾಯಿ ಮಂಡಿ, ನೆಹರು ಕ್ರೀಡಾಂಗಣದ ಒಳಗಡೆ ಇರುವ ಸಾರ್ವಜನಿಕ ಶೌಚಾಲಯದ ಹಿಂಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಿರಿಯೂರು ನಗರ ಪೋಲಿಸ್ ಠಾಣೆಯ ಪಿ ಎಸ್ ಐ ಅನಸೂಯ ಹಾಗೂ ಹೊರಕೇರಪ್ಪ ಸೇರಿದಂತೆ ಸಿಬ್ಬಂದಿ ತನಿಖೆ ನಡೆಸಿ ಮೃತದೇಹವನ್ನು ಸ್ಥಳಾಂತರಿಸಿದ್ದಾರೆ.
ಮೃತಪಟ್ಟ ವ್ಯಕ್ತಿ ಯಾರು ಎಂದು ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಮುಂದಿನ ತನಿಖೆ ಆರಂಭಿಸಿದ್ದಾರೆ.
ವರದಿ: ಮುರುಳಿಧರನ್ ಆರ್ ಚಿತ್ರದುರ್ಗ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz