ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ಮೊನ್ನೆಯಷ್ಟೇ ಬಸ್ ಡಿಕ್ಕಿಯಾಗಿ ಮೂರು ಎಮ್ಮೆಗಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಇದೀಗ ತುರುವೇಕೆರೆಯಿಂದ ಕೆ.ಬಿ. ಕ್ರಾಸ್ ಗೆ ಹೊರಟಿದ್ದ ತವೇರಾ ಕಾರು ಬಾಣಸಂದ್ರ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಭಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಟವೇರಾ ಕಾರು ಗುದ್ದಿದ ರಬಸಕ್ಕೆ ದ್ವಿಚಕ್ರವಾಹನ ಸಂಪೂರ್ಣವಾಗಿ ನುಗ್ಗಿಜ್ಜಾಗಿದೆ ತವೇರಾ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಈ ಜಾಗದಲ್ಲಿ ರಸ್ತೆ ಹುಬ್ಬು ಇಲ್ಲದ ಕಾರಣ ವೇಗವಾಗಿ ಬಂದ ವಾಹನಗಳು ಅಪಘಾತಗಳು ನಡೆಯುತ್ತಿವೆ. ಇಂತಹ ದುರ್ಘಟನೆಗಳು ಮತ್ತೆ ಮತ್ತೆ ನಡೆಯುತ್ತಲೇ ಇರುತ್ತವೆ ಎಂದು ಸಾರ್ವಜನಿಕರು ಪಿ ಡಬ್ಲ್ಯೂ ಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಇಲ್ಲಿನ ನಿವಾಸಿಗಳು, ಅಪಘಾತಗಳನ್ನು ಕಂಡು ಸಾಕಾಗಿ ಹೋಗಿದೆ. ನಿಮ್ಮ ಸುದ್ದಿ ವಾಹಿನಿಯ ಮೂಲಕವಾದರೂ ಸಂಬಂಧಪಟ್ಟ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆಯವರಿಗೆ ಸಮಸ್ಯೆ ಮನವರಿಕೆ ಮಾಡಿ ಎಂದು ಸಾರ್ವಜನಿಕರು ನಮ್ಮತುಮಕೂರು ಪ್ರತಿನಿಧಿಯ ಬಳಿ ಅಳಲು ತೋಡಿಕೊಂಡಿದ್ದಾರೆ.
ಒಂದರ ಹಿಂದೊಂದರಂತೆ ಇಲ್ಲಿ ಅಪಘಾತಗಳು ನಡೆಯುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿರುವುದು ಇಲ್ಲಿನ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜನರು ಸತ್ತ ಮೇಲೆ ಪರಿಹಾರ ಕೊಡಲು ಇಟ್ಟಿರುವ ಹಣದಿಂದಾದರೂ ರಸ್ತೆ ಸರಿಪಡಿಸಿ, ಜನರ ಪ್ರಾಣ ಕಾಪಾಡಿ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz