ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಕುಟುಂಬಕ್ಕೆ ಮತ್ತೊಮ್ಮೆ ಬೆದರಿಕೆ ಬಂದಿದೆ. ಗಿರ್ಗಾಂವ್ ನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಂಬಾನಿ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.
ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ವ್ಯಕ್ತಿ ಮೂರ್ನಾಲ್ಕು ಬಾರಿ ಫೋನ್ ಮಾಡಿ ಅಂಬಾನಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾನೆ. ಅದರ ನಂತರ, ಮುಂಬೈ ನಗರ ಪೊಲೀಸರು ಮಧ್ಯಪ್ರವೇಶಿಸಿ ದಹಿಸರ್ ಪ್ರದೇಶದಲ್ಲಿ ಶಂಕಿತನನ್ನು ಬಂಧಿಸಿದರು. ಪ್ರಾಥಮಿಕ ತನಿಖೆಯಿಂದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz