ಕೋಲಾರ: ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತಗೊಂಡ ಪರಿಣಾಮ, ದಂಪತಿ ಸಾವನ್ನಪ್ಪಿ, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ವಿರುಪಾಕ್ಷಿ ಗೇಟ್ ಬಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದೆ. ಈ ಪರಿಣಾಮ ಬಸ್ಸಿನಲ್ಲಿದ್ದಂತ ದಂಪತಿಗಳಿಬ್ಬರು ಸ್ಥಳದಲ್ಲೇ ದುರ್ಮರಣಹೊಂದಿರೋದಾಗಿ ತಿಳಿದು ಬಂದಿದೆ.
ಇನ್ನೂ ಬಸ್ ನಲ್ಲಿದ್ದಂತ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಆಂಧ್ರಪ್ರದೇಶದ ಗುಂಟೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂಬುದಾಗಿ ತಿಳಿದು ಬಂದಿದೆ. ಅಪಘಾತಗೊಂಡ ಬಸ್ಸಿನಲ್ಲಿ 30 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz