ಬೆಂಗಳೂರು: ರೌಡಿಶೀಟರ್ ನಿಂದ ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ವಿನುತಾ(45) ಇರಿತಕ್ಕೆ ಒಳಗಾದ ಮಹಿಳಾ ಪೊಲೀಸ್. ಆರೋಪಿ ರೌಡಿಶೀಟರ್ ಶೇಕ್ ಶರೀಫ್(25) ಕೃತ್ಯವೆಸಗಿದ್ದಾನೆ.
ಇತ್ತೀಚೆಗೆ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಮತ್ತೆ ಕೊಲೆಗೆ ಸಂಚುರೂಪಿಸಿರುವುದಾಗಿ ಪೊಲೀಸರಿಗೆ ಮಾಹಿತಿ ಬಂದಿದ್ದು, ಆತನನ್ನು ಠಾಣೆಗೆ ಕರೆದುಕೊಂಡು ಬರಲು ಆಗಸ್ಟ್ 5 ರಂದು ಹೆಡ್ ಕಾನ್ಸ್ ಟೇಬಲ್ ವಿನುತಾ ಮತ್ತು ಸಿಬ್ಬಂದಿ ಹೋಗಿದ್ದಾರೆ.
ಆತ ಜ್ಯೋತಿ ನಗರದಿಂದ ರೆಡ್ಡಿಪಾಳ್ಯಕ್ಕೆ ಹೋಗಿರುವ ಮಾಹಿತಿ ಸಿಕ್ಕಿದ್ದು, ರಾತ್ರಿ 9:30ಕ್ಕೆ ಠಾಣೆಗೆ ಕರೆದುಕೊಂಡು ಹೋಗಲು ಪೊಲೀಸ್ ಸಿಬ್ಬಂದಿ ಮುಂದಾದಾಗ ಡ್ರ್ಯಾಗರ್ ನಿಂದ ಇರಿದು ಪರಾರಿಗೆ ಯತ್ನಿಸಿದ್ದಾನೆ.
ಸ್ಥಳೀಯರ ನೆರವಿನಿಂದ ಆರೋಪಿಯನ್ನು ಹಿಡಿದು ಪೋಲಿಸ್ ಠಾಣೆಗೆ ಕರೆ ತರಲಾಗಿದೆ. ಗಾಯಗೊಂಡ ಮಹಿಳಾ ಹೆಡ್ ಕಾನ್ಸ್ಟೇಬಲ್ ವಿನುತಾ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದು, ಹೆಚ್.ಎ.ಎಲ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


