ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಚಿತ್ರ ನಟ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ರಾಜ್ ಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ವರನಟ ಡಾ. ರಾಜ್ ಕುಮಾರ್ ಸಮಾಧಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಘವೇಂದ್ರ ರಾಜ್ ಕುಮಾರ್ ಅವರು ಸಿಎಂ ಜೊತೆ ಚರ್ಚೆ ನಡೆಸಿದರು. ಇದಕ್ಕೆ ಸಂಬಂಧಪಟ್ಟಂತೆ ಸಿದ್ಧಪಡಿಸಲಾಗಿರುವ ಯೋಜನೆಯ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು.
ಈ ಕುರಿತು ಸಿಎಂ ಸಂಬಂಧ ಪಟ್ಟ ಅಧಿಕಾರಗಳ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy