ಬೆಳಗಾವಿ : ಬೈಕ್ ಸವಾರನ ಹುಚ್ಚಾಟಕ್ಕೆ 4 ವರ್ಷದ ಬಾಲಕ ಬಲಿಯಾದ ಘಟನೆ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಮಹಾಂತೇಶ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಜಯ್ ಸುಭಾಷ್ (4) ಎಂದು ಗುರುತಿಸಲಾಗಿದೆ.
ಮೃತ ಅಜಯ್ ಗೇಟ್ ತೆಗೆಯುತ್ತಿದ್ದಾಗ ವೇಗವಾಗಿ ಬಂದ ಬೈಕ್ ಸವಾರ ಕಾಂಪೌಂಡ್ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಗೇಟ್ ಸಮೇತವಾಗಿ ಗೋಡೆ ಬಾಲಕನ ಮೇಲೆ ಬಿದ್ದಿದೆ.
ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy