ಬೆಳಗಾವಿ : ನಗರದ ಚನ್ನಮ್ಮ ವೃತ್ತದಲ್ಲಿರುವ ವಿಶ್ವರಾಜ ಸುಗರ್ಸ್ ಪ್ರೈವೇಟ್ ಲಿಮಿಟೆಡ್ ಎಂದು ಇಂಗ್ಲೀಷ್ ಬರಹ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ಚನ್ನಮ್ಮ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ರಾಜ್ ಶುಗರ್ಸ್ ಲಿಮಿಟೆಡ್ ಇಂಗ್ಲಿಷ್ ಬರಹ ತೆಗೆದು ಕನ್ನಡದಲ್ಲಿ ಬರೆಯಬೇಕು ಎಂದು ಪ್ರತಿಭಟಿಸಿದರು.
ರಾಜಕಾರಣಿಗಳ ಸುಗರ್ ಫ್ಯಾಕ್ಟರಿ ಹೆಸರುಗಳನ್ನ ಅಳವಡಿಸಿ ರಾಜಕಾರಣ ಮಾಡುತ್ತಿದ್ದಾರೆ. ಆದಕಾರಣ ರಾಣಿ ಚೆನ್ನಮ್ಮ ವೃತನಲ್ಲಿ ಚನ್ನಮ್ಮನ ಹೆಸರಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಜಿಲ್ಲಾ ಅಧ್ಯಕ್ಷ ದೀಪಕ್ ಬುರಲಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಜಿಲ್ಲಾಧ್ಯಕ್ಷ ಬಾಳಪ್ಪ ಗುಡುಗೇನಟ್ಟಿ ಹಾಗೂ ಎರಡು ಸಂಘಟನೆಯ ಪದಾಧಿಕಾರಿಗಳು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತದನಂತರ ಕನ್ನಡ ಸಾಹಿತ್ಯ ಭವನದಲ್ಲಿ ಸೇರಿರುವ ಕಾರ್ಯಕರ್ತರನ್ನು ಒತ್ತಾಯ ಪೂರ್ವಕವಾಗಿ ಕಡೆ ಬಜಾರ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy