ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ಸುಳ್ಳು ಸುದ್ದಿ ಬಿತ್ತರಿಸುತ್ತಿದ್ದ ಎಂಟು ಯೂಟ್ಯೂಬ್ ಚಾನೆಲ್ ಗಳನ್ನು ಬ್ಲಾಕ್ ಮಾಡಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಆದೇಶ ಹೊರಡಿಸಿದೆ. ಇವುಗಳಲ್ಲಿ 7 ಭಾರತೀಯ ಚಾನಲ್‌ಗಳು ಮತ್ತು ಒಂದು ಪಾಕಿಸ್ತಾನಿ ಚಾನೆಲ್ ಸೇರಿದೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನೀಡಿರುವ ಮಾಹಿತಿ ಪ್ರಕಾರ, ‘ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದ 8 ಯೂಟ್ಯೂಬ್ ಚಾನೆಲ್‌ಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬ್ಲಾಕ್ ಮಾಡಿದೆ.
ಐಟಿ ನಿಯಮಗಳ ಪ್ರಕಾರ, 2021 ರ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ ಯೂಟ್ಯೂಬ್ ನ್ಯೂಸ್ ಚಾನಲ್ ಗಳನ್ನು ಬ್ಲಾಕ್ ಮಾಡಿದೆ. ಬ್ಯಾನ್ ಮಾಡಲಾದ ಯೂಟ್ಯೂಬ್ ಚಾನೆಲ್‌ಗಳು 114 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದವು, ಹಾಗೂ 85 ಲಕ್ಷ 73 ಸಾವಿರ ಸಬ್ಸ್ಕ್ರೈಬ್ ಹೊಂದಿದ್ದವು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy