ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಸಮ್ಮೇಳನವು ಆಗಸ್ಟ್ 26ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಬೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಆರ್ ಪಿ ಐ ರಾಜ್ಯಾಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ ತಿಳಿಸಿದರು.
ಆರ್ ಪಿಐ ಪಕ್ಷದ ವತಿಯಿಂದ ತುಮಕೂರಿನ ಎಂ.ಜಿ. ರಸ್ತೆಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ತುಮಕೂರಿನಿಂದ 2 ಸಾವಿರಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ರಾಮ್ ದಾಸ್ ಅಠವಳೆ ರವರ ಮುಖಂಡತ್ವದಲ್ಲಿ ದೇಶದ 31ರಾಜ್ಯಗಳಲ್ಲಿ ಪಕ್ಷವು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಇದೀಗ 10 ಲಕ್ಷ ಜನರ ಸದಸ್ಯತ್ವದ ಗುರಿಯ ಅಭಿಯಾನ ತುಮಕೂರು ಜಿಲ್ಲೆಯಲ್ಲಿ ನಡೆಸಲಾಗುತ್ತಿದೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದರು.
ರಾಜ್ಯ ಸಮ್ಮೇಳನದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆ ಕುರಿತು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಮನವಿ ಮಾಡಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯ ತುಮಕೂರು ಜಿಲ್ಲಾಧ್ಯಕ್ಷ ನಟರಾಜು ಜಿ.ಎಲ್., ಗೌರವಾಧ್ಯಕ್ಷ ಎಂ.ರಾಮಯ್ಯ, ರಾಜ್ಯ ಕಾರ್ಯದರ್ಶಿ ಡಿ.ಹೆಚ್. ರಾಮಯ್ಯ, ರಾಜ್ಯ ಕಾರ್ಯಕಾರಣಿ ಸದಸ್ಯ ಸಾಯಿಪ್ರಕಾಶ್, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಎಂ.ಮುನಿರಾಜು, ರಾಜ್ಯ ಸಮಿತಿ ಸದಸ್ಯ ಆರ್.ಪಿ.ಐ.ಸತೀಶ್, ಸಂಚಾಲಕ ನರಸಿಂಹರಾಜ, ದಲಿತ ಮುಖಂಡ ಕಂಬತ್ತನಹಳ್ಳಿ ಶ್ರೀನಿವಾಸ್ ಹಾಗೂ ರಾಜಣ್ಣ ಯಲದಬಾಗಿ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz