ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಂಟಿಯಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು.
ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.
ಯಡಿಯೂರಪ್ಪ ಅವರು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿಗೆ ಆಯ್ಕೆಯಾದ ಬೆನ್ನಲ್ಲೇ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದರು. ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಅವರು ಹಾಲಿ ಮತ್ತು ಮಾಜಿ ಸಿಎಂಗಳಿಗೆ ಶಾಲು ಹೊದಿಸಿ ಗೌರವಿಸಿದರು. ಕಂದಾಯ ಸಚಿವ ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಇತರರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


