nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕಪೇಟೆ ಸರ್ಕಾರಿ ಶಾಲೆ ಮಾರಾಟಕ್ಕಿದೆ!
    ರಾಜ್ಯ ಸುದ್ದಿ August 19, 2022

    ಚಿಕ್ಕಪೇಟೆ ಸರ್ಕಾರಿ ಶಾಲೆ ಮಾರಾಟಕ್ಕಿದೆ!

    By adminAugust 19, 2022No Comments2 Mins Read
    sarakare shalle

    ಬೆಂಗಳೂರು: ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾಗಿದ್ದ ಚಿಕ್ಕಪೇಟೆಯ ಸರ್ಕಾರಿ ಪ್ರೌಢಶಾಲೆಯ ಕಟ್ಟಡವನ್ನು ಜಾಗದ ಸಮೇತ ಮಾರಾಟ ಮಾಡಲು ಕಂದಾಯ ಇಲಾಖೆ ಮುಂದಾಗಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
    ಶಿಕ್ಷಣ ಇಲಾಖೆಯ ತಕರಾರನ್ನೂ ಲೆಕ್ಕಿಸದೇ ಬಹುಕೋಟಿ ಮೌಲ್ಯದ ಆಸ್ತಿಯನ್ನು ಮಾರಾಟ ಅಥವಾ ಹರಾಜು ಹಾಕಲು ನಿರ್ದೇಶನ ನೀಡುವಂತೆ ಕೋರಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಂದಾಯ ಇಲಾಖೆಗೆ ಪತ್ರ ಬರೆದಿದ್ದಾರೆ. ನಗರದ ಬಹುಕೋಟಿ ಬೆಲೆ ಬಾಳುವ ಪ್ರದೇಶದಲ್ಲಿರುವ ಈ ಆಸ್ತಿಯು, ಶಾಲೆಗಾಗಿಯೇ ದಾನಿಗಳು ನೀಡಿದ ಜಾಗವಾಗಿದೆ.

    ಬೆಂಗಳೂರು ಉತ್ತರ ತಾಲ್ಲೂಕು ತಹಶೀಲ್ದಾರ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳು ಪ್ರತ್ಯೇಕವಾಗಿ ಶಾಲೆ ಇರುವ ಜಾಗ ಮತ್ತು ಕಟ್ಟಡದ ಮಾರುಕಟ್ಟೆ ಮೌಲ್ಯವನ್ನು ನಿಗದಿ ಮಾಡಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಕಂದಾಯ ಇಲಾಖೆ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಸರ್ಕಾರಿ ಶಾಲೆಯ ಭವಿಷ್ಯವೂ ನಿಂತಿದೆ.


    Provided by
    Provided by

    ಬೆಂಗಳೂರು ಉತ್ತರ ತಾಲ್ಲೂಕು ಚಿಕ್ಕಪೇಟೆ ಒಟಿಸಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆ 77 ವರ್ಷಗಳಷ್ಟು ಹಳೆಯದು. 13,735 ಚದರಡಿ ವಿಸ್ತೀರ್ಣದ ಮೈದಾನದಲ್ಲಿ 1945ರಲ್ಲೇ ಪ್ರಾಥಮಿಕ, ಮಾಧ್ಯಮಿಕ ಶಾಲೆ ಆರಂಭವಾಗಿದ್ದವು. ಸ್ವಾತಂತ್ರ್ಯಾ ನಂತರ ಅದೇ ಜಾಗದಲ್ಲಿ ಪ್ರೌಢಶಾಲೆಯನ್ನೂ ತೆರೆಯಲಾಗಿತ್ತು. ಸದ್ಯ ಇಲ್ಲಿನ ಪ್ರತಿ ಚದರಡಿಗೆ ₹40 ಸಾವಿರದಷ್ಟು ಮಾರುಕಟ್ಟೆ ಮೌಲ್ಯ ಇದೆ.ಸೇವೆಯ ನೆಪದಲ್ಲಿ ಆಸ್ತಿ ವಶಕ್ಕೆ: ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕೊಠಡಿಗಳನ್ನು ಕೆಡವಿ, ಹೊಸ ಕೊಠಡಿ ನಿರ್ಮಿಸಿಕೊಡಲು ಅವಕಾಶ ಕೋರಿ 1979ರಲ್ಲಿ ರಜತಾ ಎಂಟರ್‌ ಪ್ರೈಸಸ್‌ ಎಂಬ ಖಾಸಗಿ ಸಂಸ್ಥೆಯೊಂದು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಸಂಸ್ಥೆಯ ಮನವಿ ಪುರಸ್ಕರಿಸಿದ ಸರ್ಕಾರ ನೆಲ ಹಾಗೂ ಮೊದಲ ಮಹಡಿಯಲ್ಲಿ ವಾಣಿಜ್ಯ ಮಳಿಗೆಗಳನ್ನು ಕಟ್ಟಲು, ಎರಡನೇ ಮಹಡಿಯಲ್ಲಿ ಶಾಲೆಗಳಿಗೆ ಕೊಠಡಿ ನಿರ್ಮಿಸಿಕೊಡಲು ಒಪ್ಪಂದ ಮಾಡಿಕೊಂಡು ತಿಂಗಳಿಗೆ ₹16,350 ರಂತೆ 26 ವರ್ಷಗಳಿಗೆ ಶಾಲಾ ಜಾಗವನ್ನು ಗುತ್ತಿಗೆ ನೀಡಿತ್ತು.

    ಗುತ್ತಿಗೆ ಅವಧಿ 2005ಕ್ಕೆ ಮುಕ್ತಾಯ ವಾದ ನಂತರ ಕೋರ್ಟ್‌ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಂಡು, ನಂತರ ರಜತಾ ಕಾಂಪ್ಲೆಕ್ಸ್‌ ಬಾಡಿಗೆದಾರರ ಕ್ಷೇಮಾಭಿವೃದ್ಧಿ ಸಂಘಕ್ಕೆ 2011ರಲ್ಲಿ ತಿಂಗಳು ₹6.41 ಲಕ್ಷಕ್ಕೆ 10 ವರ್ಷಗಳಿಗೆ ಗುತ್ತಿಗೆ ನೀಡಿತ್ತು. ಈ ಅವಧಿಯೂ 2021 ಜೂನ್‌ಗೆ ಮುಕ್ತಾಯವಾಗಿದೆ. ಶಾಲೆಯ ಜಾಗದಲ್ಲಿ ಪ್ರಸ್ತುತ ನಾಲ್ಕು ಮಹಡಿಗಳ ಕಟ್ಟಡವಿದೆ. ನೆಲ ಮಹಡಿಯಲ್ಲಿ 141 ಮಳಿಗೆಗಳಿವೆ. ಎರಡನೇ ಮಹಡಿಯಲ್ಲಿ ಶಾಲೆ ಇದ್ದರೆ, ಉಳಿದೆಡೆ ಬ್ಯಾಂಕ್‌, ವಸತಿ ಗೃಹಗಳಿವೆ.

    ಶಾಲೆಗೆ ಸೇರಿದ ಜಾಗ ಎಂದು ದೃಢೀಕರಿಸುವ ದಾಖಲೆಗಳ ಕೊರತೆ ಇದೆ. ಗುತ್ತಿಗೆ ಪಡೆದವರು ಕ್ರಯಕ್ಕೆ ನೀಡುವಂತೆ ಮನವಿ ಮಾಡಿದ್ದಾರೆ. ಡಿ.ಸಿ ಪತ್ರ ತಲುಪಿದೆ. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
    –ಎಸ್‌.ಆರ್‌.ಉಮಾಶಂಕರ್, ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ

    ದಾನಿಗಳು ನೀಡಿದ ಜಾಗ. ಆಗ ದಾಖಲೆಗಳನ್ನು ನಿರ್ವಹಣೆ ಮಾಡಿಲ್ಲ. 1979ರಲ್ಲಿ ಸರ್ಕಾರ ಖಾಸಗಿಗೆ ನೀಡಿತ್ತು. ಈಗ ಸರ್ಕಾರದ ವಶದಲ್ಲಿದೆ. ತಕ್ಷಣ ಶಾಲೆಯ ಹೆಸರಿಗೆ ಖಾತೆ ಮಾಡಿಕೊಡಲು ಸೂಚಿಸಲಾಗಿದೆ.

    ಬಿ.ಸಿ.ನಾಗೇಶ್‌, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.