ಹಿರಿಯೂರು: ಬಡವರಿಗೆಂದು ಸರ್ಕಾರ ಉಚಿತವಾಗಿ ನೀಡುತ್ತಿರುವ ಅಕ್ಕಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದರಲ್ಲೂ ಕಮಿಷನ್ ದಂಧೆ ನಡೆಯುತ್ತಿದೆಯೇ? ಎಂದು ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಕೂನಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂನಿಕೆರೆ ಗ್ರಾಮದ ಎಸ್ ಸಿ ಕಾಲೋನಿಯ ನಿವಾಸಿಗಳಿಗೆ ಹುಳ, ಕಸ, ಕಡ್ಡಿಗಳಿರುವ ಅಕ್ಕಿಯನ್ನು ಸರ್ಕಾರ ವಿತರಿಸಿದೆ. ಜನರಿಗೆ ತಿನ್ನಲು ಯೋಗ್ಯವಿಲ್ಲದ ಆಹಾರ ನೀಡುವ ಮೂಲಕ , ಪ್ರಾಣಗಳಿಂತಲೂ ಕಡೆಯಾಗಿ ಸರ್ಕಾರ ನಮ್ಮನ್ನು ಪರಿಗಣಿಸುತ್ತಿದೆಯೇ? ಎಂದು ಇಲ್ಲಿನ ನಿವಾಸಿಗಳು ಪ್ರಶ್ನಿಸಿದ್ದಾರೆ.
ಸ್ಥಳೀಯ ಶಾಸಕರು ಹಾಗೂ ತಾಲ್ಲೂಕು ಆಡಳಿತ ಸೂಕ್ತ ಕ್ರಮ ವಹಿಸಿ, ಬಡವರಿಗೆ ಸರ್ಕಾರದಿಂದ ತಿನ್ನಲು ಯೋಗ್ಯವಾದ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ವರದಿ: ಮುರುಳಿಧರನ್ ಆರ್., ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz