nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾಠ ಮಾಡುತ್ತಿದ್ದ ವೇಳೆಯೇ ಕುಸಿದು ಬಿದ್ದ ಮೇಲ್ಛಾವಣಿಯ ಸಿಮೆಂಟ್!
    ಜಿಲ್ಲಾ ಸುದ್ದಿ August 19, 2022

    ಪಾಠ ಮಾಡುತ್ತಿದ್ದ ವೇಳೆಯೇ ಕುಸಿದು ಬಿದ್ದ ಮೇಲ್ಛಾವಣಿಯ ಸಿಮೆಂಟ್!

    By adminAugust 19, 2022No Comments2 Mins Read
    adalli

    ಸರಗೂರು: ತಾಲ್ಲೂಕಿನ ಆಡಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ತರಗತಿ ನಡೆಸುತ್ತಿರುವಾಗಲೇ ಕಟ್ಟಡದ ಮೇಲ್ಛಾವಣಿಯ ಸಿಮೆಂಟ್ ಕುಸಿದು ಬಿದ್ದಿದ್ದು ಶಿಕ್ಷಕರು ಮತ್ತು ಮಕ್ಕಳು ಪ್ರಾಣಯದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ.

    ಸರಗೂರು ತಾಲ್ಲೂಕಿನ ಆಡಹಳ್ಳಿ ಗ್ರಾಮದಲ್ಲಿ 20 ವರ್ಷಗಳ ಹಿಂದೆ ಈ ಕಟ್ಟಡವನ್ನು ನಿರ್ಮಾಣ ಮಾಡಿದ್ದು,  ಕಟ್ಟಡ ಇದೀಗ ಶಿಥಿಲ ಸ್ಥಿತಿಯಲ್ಲಿದೆ.  ಇದರ ಬಗ್ಗೆ ಸುಮಾರು ಬಾರಿ ಕ್ಷೇತ್ರ ಶಿಕ್ಷಣಾಧಿಕಾರಿ  ಉದಯಕುಮಾರ್ ಅವರಿಗೆ ಅರ್ಜಿ ಸಲ್ಲಿಸಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪೋಷಕರು ಮಕ್ಕಳ ಪ್ರಾಣವನ್ನು ಬಲಿ ನೀಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಶಾಲೆಯ ಮುಖ್ಯ ಶಿಕ್ಷಕರು  ನಾರಾಯಣಮೂರ್ತಿ ಮಾತನಾಡಿ, ನಮ್ಮ ಶಾಲೆಯಲ್ಲಿ ಒಟ್ಟು 70 ಮಕ್ಕಳು ಇದ್ದಾರೆ.  1ನೇ ತರಗತಿಯಿಂದ 7ನೇ ತರಗತಿವರೆಗೆ ಶಾಲೆ ನಡೆಯುತ್ತಿದೆ. ಶಾಲೆಯಲ್ಲಿ ನಾಲ್ಕು ಕಟ್ಟಡಗಳಿವೆ.  ಈ ಪೈಕಿ ಒಂದು ಕಟ್ಟಡದಲ್ಲಿ ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಮೇಲ್ಛಾವಣಿಯಿಂದ  ಕಾಂಕ್ರೀಟ್ ಕಿತ್ತು ಬಿದ್ದಿದೆ. ಆದರೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದೇವೆ. ಘಟನೆಯಿಂದಾಗಿ ಮಕ್ಕಳು ತೀವ್ರ ಭಯಭೀತರಾಗಿದ್ದಾರೆ ಎಂದು ಅಳಲು ತೋಡಿಕೊಂಡರು.

    ಶಾಲಾ ಕಟ್ಟಡದಲ್ಲಿ ಇಂತಹದ್ದೊಂದು ಘಟನೆ ನಡೆದಿರುವುದರಿಂದ ಶಾಲೆಗೆ ಮಕ್ಕಳನ್ನು ಕಳುಹಿಸುವುದು ಹೇಗೆ ಎನ್ನುವ ಚಿಂತೆ ಪೋಷಕರದ್ದಾಗಿದೆ. ಈ ಬಗ್ಗೆ  ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

    ಶಾಲೆಯಲ್ಲಿ ನಾವು ಓದುತ್ತಿದ್ದ ಸಮಯದಲ್ಲಿ ಈ ಕಟ್ಟಡವನ್ನು ನಿರ್ಮಾಣ ಮಾಡಿದ್ದಾರೆ. ಇವಾಗ  ಎರಡು ತಿಂಗಳುದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಶಾಲೆಯ ಕಟ್ಟಡ ಶಿಥಿಲಗೊಂಡು ಕಟ್ಟಡದ ಮೇಲಿನ ಭಾಗದ ಸಿಮೇಂಟ್ ಕಿತ್ತು ಬರುತ್ತಿದೆ.  ಈ ಹಿಂದೆ  ಬಿಓ ಅಧಿಕಾರಿ ಉದಯಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಶಾಲೆಯ ಪರಿಶೀಲನೆ ಮಾಡಿಕೊಂಡು ಹೋಗಿದ್ದರು. ಆದರೆ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು  ಆಡಹಳ್ಳಿ ಗ್ರಾಮದ ಮಾಜಿ ಗ್ರಾಪಂ ಸದಸ್ಯ ಹುಚ್ಚಪ್ಪ ಬೇಸರ ವ್ಯಕ್ತಪಡಿಸಿದರು.

    ನಮಗೆ ಮಾಹಿತಿ ತಿಳಿಸಿದ ಬಳಿಕ ನಮ್ಮ ಇಲಾಖೆ ಬಿ ಆರ್ ಸಿ ಅಧಿಕಾರಿಗಳನ್ನು ಕಳಿಸಿ ಕಟ್ಟಡದ ಸ್ಥಳ ಪರಿಶೀಲನೆ ಮಾಡಿದ್ದಾರೆ. ಶಾಸಕರು ಜೊತೆ ಮಾತುಕತೆ ನಡೆಸಿದ್ದೇವೆ. ಅ ಕಟ್ಟಡವನ್ನು ರಿಪೇರಿ ಮಾಡಿಸಲು ತಿಳಿಸಿದ್ದೇವೆ. ಶಾಲೆಗೆ ಒಂದು ಕಟ್ಟಡವನ್ನು ಹೊಸದಾಗಿ ನಿರ್ಮಿಸಿಕೊಡಿ ತಿಳಿಸಿದ್ದೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್ ತಿಳಿಸಿದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು

    March 8, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.