ಜಮಖಂಡಿ: ರಾಜಸ್ಥಾನದ ಜಲೋರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕೆ ದಲಿತ ಬಾಲಕನನ್ನು ಶಾಲಾ ಶಿಕ್ಷಕನೋರ್ವ ಮಾರಣಾಂತಿಕವಾಗಿ ಥಳಿಸಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ದೇಸಾಯಿ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.
ರಾಜಸ್ಥಾನ ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ರಾಜಸ್ಥಾನದಲ್ಲಿ ನಡೆದಿರುವ ಘಟನೆಯಿಂದಾಗಿ ಪ್ರಜ್ಞಾವಂತ ನಾಗರಿಕರು ತಲೆತಗ್ಗಿಸುವಂತಾಗಿದೆ. ದಲಿತರನ್ನು ವೋಟ್ ಬ್ಯಾಂಕ್ ಗೆ ಬಳಸಿಕೊಂಡ ಕಾಂಗ್ರೆಸ್ ಈ ಘಟನೆಗೆ ಏನು ಉತ್ತರ ನೀಡುತ್ತದೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಕುಶಾಲ ವಾಘಮೋರೆ, ಗಣೇಶ ಸಿರಿಗನ್ನವರ ಪ್ರಶಾಂತ ಘಾಯಕವಾಡ, ವಿಜಯಲಕ್ಷ್ಮಿ ತುಂಗಳ ಸೇರಿದಂತೆ ಹಲವಾರು ಬಿ ಜೆ ಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಬಂದೇನವಾಜ ನದಾಫ್, ಜಮಖಂಡಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz