nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026
    Facebook Twitter Instagram
    ಟ್ರೆಂಡಿಂಗ್
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ನಾಗರಿಕರ ಸಹಕಾರ ಅತ್ಯಗತ್ಯ: ಡಿವೈಎಸ್ಪಿ ಕೆ. ಎಸ್. ವೆಂಕಟೇಶ್ ನಾಯ್ಡು
    ಮಧುಗಿರಿ August 20, 2022

    ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ನಾಗರಿಕರ ಸಹಕಾರ ಅತ್ಯಗತ್ಯ: ಡಿವೈಎಸ್ಪಿ ಕೆ. ಎಸ್. ವೆಂಕಟೇಶ್ ನಾಯ್ಡು

    By adminAugust 20, 2022No Comments3 Mins Read
    madugire

    ಮಧುಗಿರಿ: ಸಮಾಜದಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ನಾಗರಿಕರು ತಮ್ಮ ಜವಾಬ್ದಾರಿಯನ್ನು ಅರಿತು ತಕ್ಷಣವೇ ದೂರುಗಳನ್ನು ನೀಡುವ ಮೂಲಕ ಪೊಲೀಸರಿಗೆ ಸಹಕರಿಸಬೇಕಾಗಿದೆ ಎಂದು ಮಧುಗಿರಿ ಡಿವೈಎಸ್ಪಿ ಕೆ.ಎಸ್. ವೆಂಕಟೇಶ್ ನಾಯ್ಡು ತಿಳಿಸಿದರು.

    ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಗುರುವಾರದಂದು ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಸಂಪರ್ಕ ಸಭೆಯಲ್ಲಿ ನಾಗರಿಕರು ಬರಿ ದೂರುಗಳನ್ನು ಹೇಳುತ್ತಾ ಇದ್ದರೆ ಸಾಲದು ಘಟನೆ ನಡೆದ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ನಿಶ್ಚಿತವಾಗಿ ಆಗಲಿ ಅಥವಾ ದೂರವಾಣಿ ಮೂಲಕ ದೂರು ಸಲ್ಲಿಸಿದರೆ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಾಧ್ಯ ಎಂದರು.

    ಮಧುಗಿರಿ ಉಪವಿಭಾಗ ಮಟ್ಟದಲ್ಲಿ ಜನಸಂಪರ್ಕ ಸಭೆಯಲ್ಲಿ ಮುಖಂಡರಾದ ಎಸ್ ಬಿ ಟಿ ರಾಮು ಮಾತನಾಡಿ, ಉತ್ತಮ ಸಂಚಾರಿ ವ್ಯವಸ್ಥೆ ಹಾಗೂ ಬೀಟ್ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಪೋಲಿಸ್ ಇಲಾಖೆ ನಿಭಾಯಿಸುತ್ತಿದೆ. ಜೊತೆಗೆ ಈ ಹಿಂದೆ ಸಿಪಿಐ ಸರ್ದಾರ್ ರವರು ಪಟ್ಟಣದ ಹಲವು ಪ್ರಮುಖ ಅಪಘಾತ ಸ್ಥಳಗಳನ್ನು ಗಮನಿಸಿ, ಅಪಘಾತ ತಡೆಗೆ ಸರ್ಕಲ್ ಗಳಲ್ಲಿ ವೃತ್ತಗಳನ್ನು ನಿರ್ಮಿಸಿದ್ದು ಇದರಿಂದ ಜನಸಾಮಾನ್ಯರ ರಕ್ಷಣೆಯಾಗಿದೆ. ಜನಸ್ನೇಹಿಯಾಗಿ ಕೆಲಸ ನಿರ್ವಹಿಸಿದ್ಧು ಮುಂದೆಯೂ ಸಹ ಇಂತಹ ಕೆಲಸ ನಡೆಯಲಿ ಎಂದು ಆಶಿಸಿದರು.

    ಐ ಡಿ ಹಳ್ಳಿ ಹೋಬಳಿಯ ವಿಠಲಾಪುರ ಮತ್ತು ಐ.ಡಿ.ಹಳ್ಳಿ ಗ್ರಾಮದಲ್ಲಿರುವ ಮದ್ಯದ ಅಂಗಡಿಗಳನ್ನು ಸ್ಥಳಾಂತರಿಸುವಂತೆ ಅಲ್ಲಿನ ನಾಗರಿಕರು ಪೊಲೀಸರ ಗಮನ ಸೆಳೆದರು. ಶಾಲಾ ಕಾಲೇಜು ಆವರಣಗಳಲ್ಲಿ ಕುಡಿದು ಗಲಾಟೆ ಮಾಡುವುದು ಐ.ಡಿ. ಹಳ್ಳಿ ಆಸ್ಪತ್ರೆಯಲ್ಲಿ ಪ್ರತಿ ದಿನ ಮಹಿಳಾ ಸಿಬ್ಬಂದಿಯ ಕಾರ್ಯ ನಿರ್ವಹಿಸುವುದರಿಂದ ಕುಡುಕರ ಹಾವಳಿ ಯಿಂದಾಗಿ ಸಾಕಷ್ಟು ತೊಂದರೆಗಳಾಗುತ್ತಿದೆ ಎಂದು ಸಭೆಯ ಗಮನ ಸೆಳೆಯಲಾಯಿತು.

    ಇತ್ತೀಚೆಗೆ ವಿಠಲಾಪುರ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಕುಡುಕರ ಹಾವಳಿ ಹೆಚ್ಚಾಗಿ ಅಲ್ಲಿನ ಶಿಕ್ಷಕಿಯರನ್ನೇ ನೃತ್ಯ ಮಾಡಲು ಗಲಾಟೆ ಮಾಡಿದಂತಹ ಸನ್ನಿವೇಶ ನಿರ್ಮಾಣವಾಗಿತ್ತು. ಹರಳಾಪುರ ಮತ್ತು ಕೊಂಡವಾಡಿ ರಸ್ತೆಗಳಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆಯಲ್ಲಿ ಕಿರುಚಾಟ ಹೆಚ್ಚಾಗಿ ಗ್ರಾಮಸ್ಥರ ಶಾಂತಿಗೆ ಭಂಗವಾಗುತ್ತಿದೆ ಎಂದು ದೂರಲಾಯಿತು.

    ಆಂಧ್ರದ ಗಡಿ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟಬೇಕು ಎಂದು ಬಹುತೇಕ ನಾಗರಿಕರು ಆಗ್ರಹಿಸಿದರು, ಸಂಬಂಧಪಟ್ಟ ಪೋಲಿಸರು ಮಾತನಾಡಿ ಈ ವಿಚಾರವಾಗಿ ಕ್ರಮ ಕೈಗೊಳ್ಳಲು ಅಬಕಾರಿ ಇಲಾಖೆಯವರಿಗೆ ಸೂಚಿಸಲಾಗುವುದು ಎಂದರು.

    ದಲಿತ ಮುಖಂಡ ದೊಡ್ಡೇರಿ ಕಣಿಮಯ್ಯ ಮಾತನಾಡಿ, ವಸತಿ ನಿಲಯಗಳಲ್ಲಿ ಆಹಾರದ ವ್ಯವಸ್ಥೆ ಸರಿಯಾಗಿ ನಡೆಯುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಪೊಲೀಸ್ ಸಭೆಯಲ್ಲಿ ಉತ್ತರ ನೀಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ, ಈ ಬಗ್ಗೆ ಪ್ರತಿನಿತ್ಯವೂ ಆಹಾರದ ಬಗ್ಗೆ ಮೊಬೈಲ್ ಮೂಲಕ ಅಪ್ ಲೋಡ್ ಆಗುತ್ತಿದೆ. ನಮಗೆ ಇಲ್ಲಿಯವರೆಗೆ ಸರಿಯಾದ ದೂರು ಬಂದಿಲ್ಲ. ವಸತಿ ನಿಲಯದಲ್ಲಿ ಆಹಾರ ವ್ಯತ್ಯಯವಾಗುತ್ತಿದೆಂದು ನಿರ್ದಿಷ್ಟ ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

    ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಣದೆ ರೋಗಿಗಳು ದಾಖಲಾದರೆ ಅವರಿಗಿರೋ ರೋಗದ ಜೊತೆಗೆ ಮತ್ತೊಂದು ರೋಗ ಹರಡುವ ಸಾಧ್ಯತೆ ಹೆಚ್ಚಾಗಿದೆ. ವೈದ್ಯರನ್ನು ಸಂಪರ್ಕಿಸಲು ಚೀಟಿ ಪಡೆಯಲು ಸಾಕಷ್ಟು ಗಂಟೆ ಗಟ್ಟಲೆ ಕಾಯಬೇಕಾದ ಪರಿಸ್ಥಿತಿಯಿದೆ, ವಿಕಲಚೇತನರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ಆರೋಪಗಳು ಕೇಳಿ ಬಂದವು.

    ಇತ್ತೀಚೆಗೆ ಜಯಮಂಗಲಿ ನದಿಯ ಪ್ರದೇಶಗಳಲ್ಲಿ ರಾತ್ರಿ ವೇಳೆ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದೆ ಇದನ್ನು ತಡೆಗಟ್ಟುವಂತೆ ಅಲ್ಲಿನ ರೈತರು ಸಭೆಯಲ್ಲಿ ವಿಚಾರವನ್ನು ಗಮನ ಸೆಳೆದರು.

    ಕೆಎಸ್ ಆರ್ ಟಿಸಿ ಬಸ್ಸುಗಳು ಖಾಸಗಿ ಬಸ್ ನಿಲ್ದಾಣದಲ್ಲಿ ನಿಲ್ಲಿಸದ ಕಾರಣ ರೋಗಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಇದಕ್ಕೆ ಪೋಲಿಸರು ಅಡ್ಡಪಡಿಸುತ್ತಿದ್ದಾರೆ ಎಂದು ಕೆಎಸ್ ಆರ್ ಟಿಸಿ ಬಸ್ ಚಾಲಕರು ಹೇಳುತ್ತಿರುವುದರಿಂದ ಕೋರಿಕೆ ನಿಲುಗಡೆ ಮಾಡಲು ಅನುಮತಿ ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು. ಈ ವಿಚಾರವಾಗಿ ಟೌನ್ ಸಬ್ಇನ್ಸ್ಪೆಕ್ಟರ್ ಮಾತನಾಡಿ, ನಾವು ಕೆಎಸ್ ಆರ್ ಟಿಸಿ ಇಲಾಖೆಗೆ ಈ ರೀತಿಯಾಗಿ ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ. ಇದು ತಪ್ಪು ತಿಳುವಳಿಕೆ ಎಂದು ತಿಳಿಸಿ, ಕೂಡಲೇ ಈ ವಿಚಾರವಾಗಿ ತಮ್ಮನ್ನ ಪಟ್ಟ ಡಿಪೋ ಮ್ಯಾನೇಜರ್ ಹತ್ತಿರ ವಿಷಯವನ್ನು ಚರ್ಚಿಸಿ ಜನಸಾಮಾನ್ಯರಿಗೆ ಅನುಕೂಲವನ್ನು ಕಲ್ಪಿಸುವುದಾಗಿ ತಿಳಿಸಿದರು.

    ಕಾಟಗನಹಟ್ಟಿ, ಹುಣಸೆ ಮರದಹಟ್ಟಿ ಭಾಗದಲ್ಲಿ ಸುಮಾರು 70 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿನಿತ್ಯ ಸಂಚರಿಸುತ್ತಿದ್ದು ಯಾವುದೇ ಬಸ್ಸುಗಳ ನಿಲುಗಡೆ ಮಾಡದ ಕಾರಣ ಖಾಸಗಿ ಆಟೋಗಳಲ್ಲಿ ವಿದ್ಯಾರ್ಥಿಗಳು ಬರುವಂತಾಗಿದೆ. ಈ ಸಂದರ್ಭದಲ್ಲಿ ಮಾರ್ಗಮದ್ಯೆ ಆಟೋಗಳಿಗೆ ಪೊಲೀಸರು ದಂಡ ವಿಧಿಸುತ್ತಿರುವುದರಿಂದ ಅವರೂ ಸಹ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದ ಕಾರಣ ನಡೆದುಕೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಆದ್ದರಿಂದ ಖಾಸಗಿ ಬಸ್ಸು ಮತ್ತು ಕೆಎಸ್ಆರ್ಟಿಸಿ ಬಸ್ಸುಗಳನ್ನು ಶಾಲಾ ಸಮಯದಲ್ಲಿ ನಿಲ್ಲಿಸುವಂತೆ ಸೂಚಿಸಬೇಕೆಂದು ಗ್ರಾಪಂ ಮಾಜಿ ಸದಸ್ಯ ಗೌಡಮುದ್ದಯ್ಯ ತಿಳಿಸಿದರು. ಇದಕ್ಕೆ ಪ್ರತ್ಯುತ್ತರವಾಗಿ ಪೊಲೀಸ್ ಇಲಾಖೆ ಖಾಸಗಿ ಬಸ್ ಮಾಲೀಕರು ನೊಂದಿಗೆ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

    ಇತ್ತೀಚೆಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ಗೂ ಬಾರದೇ ಶಾಲೆಗೂ ಹೋಗದೇ ಎಲ್ಲೆಂದರಲ್ಲಿ ಹೋಗುತ್ತಿರುವುದರಿಂದ ಅಪರಾಧ ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ ಎಂದು ಸಿಡಿಪಿಒ ಅನಿತಾ ಗಮನ ಸೆಳೆದರು. ಈ ಬಗ್ಗೆ ಮನೆಯಲ್ಲಿ ಪೋಷಕರು ತಮ್ಮ ಮಕ್ಕಳ ಕಾರ್ಯಚಟುವಟಿಕೆ ಬಗ್ಗೆ ಆಗಾಗ್ಗೆ ಗಮನಹರಿಸಿದರೆ ಒಳಿತು ಎಂದು ತಿಳಿಸಿದರು.
    ಸಭೆಯಲ್ಲಿ ಬಡವನಹಳ್ಳಿ ಪಿಐ ಹನುಮಂತರಾಯಪ್ಪ, ಪಿಎಸ್ ಐಗಳಾದ ಕೆ.ಟಿ.ರಮೇಶ್, ಮಿಡಿಗೇಶಿ ಪಿಎಸ್ಐ ತಾರಾಸಿಂಗ್, ಕೊಡಿಗೇನಹಳ್ಳಿ ಪಿಎಸ್ ಐ ನಾಗರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ, ಎಆರ್ ಟಿಒ ದೇವಿಕಾ ಅಬಕಾರಿ ಇಲಾಖೆ ಸಬ್ ಇನ್ಸ್ ಪೆಕ್ಟರ್ ರಾಮಮೂರ್ತಿ ಮತ್ತು ಮಧುಗಿರಿ ತಾಲ್ಲೂಕಿನ ನಾಗರಿಕರು ಪಾಲ್ಗೊಂಡಿದ್ದರು.

    ವರದಿ: ಅಬಿದ್ ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!

    September 24, 2026

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?

    September 22, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    ಹಾವೇರಿ: ಹಾವೇರಿ ತಾಲೂಕಿನ ಹಳೇರಿತ್ತಿ ಬಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಮತ್ತು ಲಾರಿ ನಡುವೆ…

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.