ಧಾರವಾಡ: ನಗರದಲ್ಲಿ ಸಾವರ್ಕರ್ ಫೋಟೋ ಸುಟ್ಟ ಪ್ರಕರಣ ಸಂಬಂಧಿಸಿ ಕಾಂಗ್ರೆಸ್ ನ 12 ಕಾರ್ಯಕರ್ತರ FIR ದಾಖಲಿಸಲಾಗಿದೆ.
ನಿನ್ನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆಯಲ್ಲಿ ವೀರ್ ಸಾವರ್ಕರ್ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಬಳಿಕ ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ.
ಈ ವೇಳೆ ಕಾರ್ಯಕರ್ತರು ಪೂರ್ವ ನಿಯೋಜಿತವಾಗಿ ಐದಾರು ಭಾವಚಿತ್ರ ತಂದಿದ್ದರು. ಪೊಲೀಸ್ ಬಂದೋಬಸ್ತ್ ಮಧ್ಯೆಯೇ ಸಾವರ್ಕರ್ ಭಾವಚಿತ್ರಕ್ಕೆ ಅವಮಾನ, ಸುಟ್ಟು ಹಾಕಿದರು.
ಕಾಂಗ್ರೆಸ್ ಕಾರ್ಯಕರ್ತರಿಂದ ವೀರ್ ಸಾವರ್ಕರ್ ಫೋಟೋ ಸುಟ್ಟ ಹಿನ್ನೆಲೆ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಧಾರವಾಡದ ಉಪ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡಿದ್ದಾರೆ.
ಸಾವರ್ಕರ್ ಫೋಟೋ ಸುಟ್ಟವರನ್ನು ಬಂಧಿಸುವಂತೆ ಧಾರವಾಡ-ಬೆಳಗಾವಿ ರಸ್ತೆ ತಡೆದು ಬಿಜೆಪಿ ಮತ್ತು ಹಿಂದೂಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಭಜರಂಗದಳದ ಮುಖಂಡ ಶಿವಾನಂದ ಸತ್ತಿಗೇರಿ ಧಾರವಾಡ ಉಪಠಾಣೆಗೆ ದೂರು ನೀಡಿದ್ದರು. ಇಂದು ಧಾರವಾಡ ಉಪಠಾಣೆಯಲ್ಲಿ ಕಾಂಗ್ರೆಸ್‌ನ 12 ಕಾರ್ಯಕರ್ತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy