ಚಿಕ್ಕಮಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಪಶ್ಚಾತಾಪವಾಗಿದೆ. ಲಿಂಗಾಯತ ಧರ್ಮದ ವಿಚಾರದಲ್ಲಿ ಅನೇಕರು ನನ್ನ ದಾರಿ ತಪ್ಪಿಸಿದ್ದಾರೆ. ಆ ಬಗ್ಗೆ ನನಗೆ ಪಶ್ಚತ್ಥಾಪ ಇರೋದಾಗಿ ಸಿದ್ಧರಾಮಯ್ಯ ಒಪ್ಪಿಕೊಂಡಿದ್ದಾರೆ ಎಂದು ಬಾಳೆಹೊನ್ನೂರು ಶ್ರೀಗಳು ಹೇಳಿದ್ದಾರೆ.
ಇಂದು ಸಿದ್ಧರಾಮಯ್ಯ ಅವರು ಬಾಳೆಹೊನ್ನೂರಿನ ರಂಭಾಪುರಿ ಶ್ರೀ ಮಠಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ರಂಭಾಪುರಿ ಶ್ರೀಗಳು, ನಾನು ಈ ಹಿಂದೆ ಸಿದ್ಧರಾಮಯ್ಯ ಅವರಿಗೆ ಆಹ್ವಾನ ನೀಡಿದ್ದೆ. ಆ ಆಹ್ವಾನದ ಮೇರೆಗೆ ಇಂದು ಕೊಟ್ಟ ಮಾತಿನಂತೆ ಸಿದ್ಧರಾಮಯ್ಯ ರಂಭಾಪುರಿ ಮಠಕ್ಕೆ ಭೇಟಿ ನೀಡಿದ್ದಾರೆ ಎಂದರು.
ಇದೇ ವೇಳೆಯಲ್ಲಿ ವೀರಶೈವ ಲಿಂಗಾಯತ ಧರ್ಮದ ವಿಚಾರವಾಗಿ ನಮ್ಮ ಜೊತೆ ಮಾತನಾಡಿದ ಅವರು. ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಸಿದ್ಧರಾಮಯ್ಯನವರಿಗೆ ಪಶ್ಚಾತಾಪವಾಗಿರೋದನ್ನು ಹೇಳಿಕೊಂಡಿದ್ದಾರೆ. ಅವರನ್ನು ದಾರಿತಪ್ಪಿಸಿದ ಬಗ್ಗೆಯೂ ಮಾತನಾಡಿರೋದಾಗಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy