2022-23 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಈ ಕೆಳಕಾಣ ಸಿದ 08 ಯೋಜನೆಗಳಿಗೆ ಸುವಿಧಾ ತಂತ್ರಾಂಶದಡಿ (ಪೋರ್ಟಲ್) ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ ಒಟ್ಟು 08 ಯೋಜನೆಗಳಾಗಿವೆ.
ಬೆಳಗಾವಿ ಜಿಲ್ಲೆಯ ವಿಕಲಚೇತನ ವ್ಯಕ್ತಿಗಳು ಯೋಜನೆಗಳಡಿ (Suvidha Website URL: https://suvidha.karnataka.gov.in )ನಲ್ಲಿ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಸಪ್ಟಂಬರ್ 19 ರ ಒಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಹಾರ್ಡ ಪ್ರತಿಯೊಂದಿಗೆ ದ್ವಿ ಪ್ರತಿಯಲ್ಲಿ ಅರ್ಜಿಯನ್ನು ಆಯಾ ತಾಲೂಕು ಪಂಚಾಯತಿ ಕಛೇರಿಯಲ್ಲಿರುವ ಎಂ.ಆರ್.ಡಬ್ಲ್ಯೂ. ಗಳಿಗೆ ಸಲ್ಲಿಸಬೇಕು ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy