ಹಿರಿಯ ಪತ್ರಕರ್ತ, ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರು ನಿಧನರಾಗಿದ್ದಾರೆ. 45 ವರ್ಷದ ಅವರು, ಇಂದು ಬೆಳಗ್ಗೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಕುಸಿದು ಬಿದ್ದಿದ್ದರು.
ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸುಮಾರು 20 ವರ್ಷಗಳ ಕಾಲ ನಾಡಿನ ಹಲವು ಕನ್ನಡದ ಪತ್ರಿಕೆಗಳು ಹಾಗೂ ಟಿವಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಕಳೆದ ವರ್ಷದಿಂದ ಬೊಮ್ಮಾಯಿ ಅವರ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.ಬೊಮ್ಮಾಯಿ ಸಿಎಂ ಆದ ಬಳಿಕ 2021ರ ಆಗಸ್ಟ್ ನಲ್ಲಿ ಅವರ ಮಾಧ್ಯಮ ಸಂಯೋಜಕರಾಗಿ ನೇಮಕ ಮಾಡಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


