ಒಂದರ ಮೇಲೊಂದು ಮತ್ತೊಂದು ಎಂಬಂತೆ ಒಟ್ಟು 4 ಚಿರತೆಗಳು ಪ್ರತ್ಯಕ್ಷವಾಗಿವೆ. ಸದ್ಯ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಸಮೀಪ ಮೊಳವಾಡದ ಹೊಲದಲ್ಲಿ ಭಾನುವಾರ ಕಾಣಿಸಿಕೊಂಡಿದೆ.
ಮೊಳವಾಡ – ಶಿರಗುಪ್ಪಿ ರಸ್ತೆಯ ಪಕ್ಕದಲ್ಲಿರುವ ಹೊಲದಲ್ಲಿ ಚಿರತೆ ಕಾಣಿಸಿದೆ. ರೈತರು ಹೊಲದಲ್ಲಿ ನೋಡಿದಾಗ ಹೆಜ್ಜೆ ಗುರುತುಗಳು ಕಾಣಿಸಿವೆ. ಹೀಗಾಗಿ ಗ್ರಾಮದಲ್ಲಿ ಆತಂಕ ಮನೆಮಾಡಿದೆ.
ಗ್ರಾಮದಲ್ಲಿ ಡಂಗೂರ ಹೊಡೆಸಿ,ಗ್ರಾಮದ ಹೊಲದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಹೊಲಕ್ಕೆ ಹೋಗುವವರು ಎಚ್ಚರಿಕೆ ವಹಿಸಬೇಕು ಎಂದು ಗ್ರಾಮದ ಎಲ್ಲೆಡೆ ಡಂಗೂರ ಎಚ್ಚರಿಸಲಾಗಿದೆ.
ಈ ಕುರಿತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಮಾಹಿತಿ ನೀಡಿದ್ದು, ಮೊಳವಾಡದಲ್ಲಿ ಚಿರತೆ ಕಾಣಿಸಿಕೊಂಡಿರುವ ಮಾಹಿತಿ ಬಂದಿದ್ದು, ತಕ್ಷಣದಿಂದಲೇ ನಾವು ಚಿರತೆ ಶೋಧದಲ್ಲಿ ತೊಡಗಿದ್ದೇವೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy