ತುಮಕೂರು: ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸರಣಿ ಕಳತನ ನಡೆಸಿರುವ ಘಟನೆ ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಡೆದಿದೆ.
ಎಪಿಎಂಸಿಯಲ್ಲಿನ 4 ಅಂಗಡಿಗಳ ರೋಲಿಂಗ್ ಷಟರ್ ಮೀಟಿ ಕಳ್ಳತನ ನಡೆಸಲಾಗಿದ್ದು, ಗಡಾರಿಯಿಂದ ರೋಲಿಂಗ್ ಶೆಟರ್ ಮೀಟಿ ಒಳನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ಗಳನ್ನೇ ಟಾರ್ಗೆಟ್ ಮಾಡಿದ್ದಾರೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಸಪ್ತಗಿರಿ ಎಂಟರ್ಪ್ರೈಸಸ್, ಏಳುಕೋಟಿ ಮೈಲಾರಲಿಂಗೇಶ್ವರ ಸ್ವಾಮಿ ಟ್ರೇಡರ್ಸ್, ಸಂಜಯ್ ಟ್ರೇಡರ್ಸ್ , ಚಂದನ ಟ್ರೇಡರ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ.
ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಕೃಷಿ ಉತ್ಪನ್ನ ಮಾರುಕಟ್ಟೆಯ ಆವಣದಲ್ಲಿ ಆವರಣದಲ್ಲಿ 40ಕ್ಕೂ ಹೆಚ್ಚು ಅಂಗಡಿಗಳಿವೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಹುಳಿಯಾರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.
ವರದಿ : ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz