ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ನಗರ ಪೊಲೀಸರು 9 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಮಾತನಾಡಿ ಗೋಕಾಕ್, ಗದಗದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದರು. ಆ.7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಗೋಕಾಕ್‌ನಲ್ಲಿ ಸ್ಮಾರ್ಟ್ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರು.
ಈ ಸಂಬಂಧ ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಪರೀಕ್ಷಾರ್ಥಿ ಸಿದ್ದಪ್ಪ ಮದೀಹಳ್ಳಿ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಸಿದ್ದಪ್ಪ ನೀಡಿದ ಮಾಹಿತಿ ಆಧರಿಸಿ ಉಳಿದ ಆರೋಪಿಗಳ ಬಂಧನ ಮಾಡಲಾಗಿದೆ ಎಂದು ಎಸ್‌ಪಿ ಡಾ.ಸಂಜೀವ್ ಪಾಟೀಲ್ ಹೇಳಿದ್ದಾರೆ. ಮೂವರು ಕಿಂಗ್‌ಪಿನ್‌ಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy