ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ ಮೂರು ಬಾರಿ ಭೂಮಿ ಕಂಪಿಸಿದ್ದು, ಜನರು ಆತಂಕಗೊಂಡಿದ್ದಾರೆ. ನಿನ್ನೆ ಸಾಯಂಕಾಲ 4:26, ರಾತ್ರಿ 9.22 ಮತ್ತು 11.04 ಗಂಟೆಯ ಸುಮಾರಿಗೆ ಭೂಮಿ ನಡುಗಿರುವ ಅನುಭವವಾಗಿದೆ.
ನಗರದ ರೈಲ್ವೆ ನಿಲ್ದಾಣ, ಗೋಳಗುಮ್ಮಟ ಸೇರಿದಂತೆ ಬಹುತೇಕ ಕಡೆಗಳಲ್ಲಿ ಭೂಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ತೀವ್ರತೆ ದಾಖಲಾಗಿತ್ತು.
ಮೇಲಿಂದ ಮೇಲೆ ಜಿಲ್ಲೆಯಲ್ಲಿ ಭೂಕಂಪನವಾಗುತ್ತಿದ್ದು, ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು. ಇತ್ತೀಚೆಗೆ ಜಿಲ್ಲೆಯಲ್ಲಿ ಶನಿವಾರ, ಭಾನುವಾರದಂದು ಕೂಡ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ದಾಖಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


