ತುಮಕೂರು: ಜಿಲ್ಲೆ ತುರುವೇಕೆರೆ ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ನಡೆದ ಅಕ್ರಮ ಕಾಮಗಾರಿಗಳನ್ನು ಪ್ರಶ್ನಿಸಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಯಿತು.
ಎಸ್.ಕೆ.ರಘು ನಂಜುಂಡಯ್ಯ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಲಿಂಗರಾಜು ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ರಘು, ಈ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಸುಮಾರು ವರ್ಷಗಳಿಂದಲೂ ಅಕ್ರಮವಾಗಿ ಕಂದಾಯ ಇಲಾಖೆಗೆ ಸೇರಿದ ಜಾಗಗಳನ್ನು ಯಾವುದೇ ಮಾಹಿತಿ ಇಲ್ಲದೆ ಕಂದಾಯ ಇಲಾಖೆಗೆ ಮಾಹಿತಿ ಕೊಡದೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದು, ಇದರ ವಿರುದ್ಧ ಮುಂದಿನ ದಿನಗಳಲ್ಲೂ ಕೂಡ ದೊಡ್ಡಮಟ್ಟದ ಹೋರಾಟವನ್ನು ಮಾಡುತ್ತೇವೆ ಎಂದು ಹೇಳಿದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಹಾಗೂ ಪಂಚಾಯತಿ ಅಧ್ಯಕ್ಷರಾದ ಜಾಬಿರ್ ಹುಸೇನ್ ಪ್ರತಿಭಟನಾಕಾರರ ಮನವೊಲಿಸಿದ ಬಳಿಕ ಪ್ರತಿಭಟನೆ ಕೈ ಬಿಡಲಾಯಿತು.
ವರದಿ: ಸುರೇಶ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz