ತುಮಕೂರು: ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಬ್ರೇಕ್ ಫೈಲ್ ಆದ ಪರಿಣಾಮ ಡಿವೈಡರ್ ಗೆ ಡಿಕ್ಕಿಯಾಗಿ ಮಗುಚಿ ಬಿದ್ದ ಘಟನೆ ರಿಂಗ್ ರೋಡ್ ನಲ್ಲಿ ನಡೆದಿದೆ.
ಬೆಳಗ್ಗಿನ ಜಾವ 5:45ರ ಸುಮಾರಿಗೆ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಲಾರಿಯು ಕನಕಪುರಕ್ಕೆ ಸಿಮೆಂಟ್ ತುಂಬಿಕೊಂಡು ಹೋಗುತ್ತಿತ್ತು ಎನ್ನಲಾಗಿದೆ.
ಬ್ರೇಕ್ ಫೈಲ್ ಆದ ಕೂಡಲೇ ಲಾರಿ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದು, ಲಾರಿಯನ್ನು ಡಿವೈಡರ್ ಗೆ ಡಿಕ್ಕಿ ಹೊಡೆದು ನಿಲ್ಲಿಸಿದ್ದಾರೆನ್ನಲಾಗಿದೆ. ಇದರಿಂದಾಗಿ ನಡೆಯಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz