nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ

    February 15, 2026

    SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    February 15, 2026
    Facebook Twitter Instagram
    ಟ್ರೆಂಡಿಂಗ್
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    • “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ
    • ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಸೇರಿದಂತೆ ಎಲ್ಲರಿಗೂ 40% ಕಮೀಷನ್ : ಗುತ್ತಿಗೆದಾರರ ಸಂಘದಿಂದ ಮತ್ತೆ ಆರೋಪ
    ರಾಜ್ಯ ಸುದ್ದಿ August 25, 2022

    ಸಿಎಂ ಸೇರಿದಂತೆ ಎಲ್ಲರಿಗೂ 40% ಕಮೀಷನ್ : ಗುತ್ತಿಗೆದಾರರ ಸಂಘದಿಂದ ಮತ್ತೆ ಆರೋಪ

    By adminAugust 25, 2022No Comments2 Mins Read
    kempanna

    ಬೆಂಗಳೂರು : ರಾಜ್ಯ ಸರ್ಕಾರದ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಖ್ಯಮಂತ್ರಿ ಬೊಮ್ಮಾಯಿಯಿಂದ ಹಿಡಿದು ಎಲ್ಲ ಸಚಿವರುಗಳು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಸುತ್ತಿದ್ದು, ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ.

    ಈ ಬಗ್ಗೆ ಮತ್ತೊಮ್ಮೆ ಪ್ರಧಾನಿ ಮೋದಿಗೆ ಪತ್ರ ಬರೆಯುವುದಾಗಿ ಕೆಂಪಣ್ಣ ಹೇಳಿದ್ದು ಕೋಲಾರ ಜಿಲ್ಲೆ ಉಸ್ತುವಾರಿ ಸಚಿವ ಮುನಿರತ್ನ ಅವರ ಹೆಸರನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪಿಸಿರುವ ಗುತ್ತಿಗೆದಾರರ ಕೆಲಸ ಮಂಜೂರು ಆಗಬೇಕೆಂದರೆ ಲಂಚ ಕೊಡಬೇಕು, ಇಲ್ಲದಿದ್ದರೆ ಗುತ್ತಿಗೆ ರದ್ದು ಮಾಡಲಾಗುವುದು,ಹಣ ಕಲೆಕ್ಟ್ ಮಾಡಿ ತನ್ನಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ನೇರವಾಗಿ ಬೆದರಿಕೆ ಹಾಕುತ್ತಾರೆ ಎಂದು ಕೆಂಪಣ್ಣ ದೂರಿದರು.


    Provided by
    Provided by

    ಸರ್ಕಾರದ ಸಚಿವರು, ಶಾಸಕರು ಲಂಚ, ಭ್ರಷ್ಟಾಚಾರದಲ್ಲಿ ನಂಬರ್ 1 ಮತ್ತು 2 ಸ್ಥಾನದಲ್ಲಿದ್ದಾರೆ. ಗುತ್ತಿಗೆದಾರರಿಂದ ಕಾಮಗಾರಿ ಹಣದಲ್ಲಿ ಶೇಕಡಾ 40ರಷ್ಟು ಲಂಚ ಪಡೆಯುತ್ತಾರೆ.

    ಅವರಿಗೆ ಇಷ್ಟೊಂದು ಲಂಚ ಹೋದರೆ ಉಳಿದ ಹಣದಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಅವರು, ಗುತ್ತಿಗೆದಾರರು ಜನಪ್ರತಿನಿಧಿಗಳ ಕಿರುಕುಳದಿಂದ ನಲುಗಿ ಹೋಗುತ್ತಿದ್ದಾರೆ ಎಂದು ಕೆಂಪಣ್ಣ ಆರೋಪಿಸಿದ್ದಾರೆ.

    ಒಂದು ವರ್ಷ 2 ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಮಾತಿಗೂ ಬೆಲೆ ಇಲ್ಲದಂತಾಗಿದೆ. ಮಾನ, ಮರ್ಯಾದೆ ಇಲ್ಲದ ಜನ ಪ್ರತಿನಿಧಿಗಳು ಇವರು. ಇನ್ನೂ 22 ಸಾವಿರ ಕೋಟಿ ಬಿಲ್ ಪಾವತಿ ಆಗಬೇಕಿದೆ. ಕೆಲವರದು ಮೂರು ವರ್ಷಗಳಿಂದ ಬಾಕಿ ಇದೆ. ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರ್ಕಾರ ಇದಾಗಿದೆ. ಇದರಲ್ಲಿ ಬೊಮ್ಮಾಯಿ ಸೇರಿದಂತೆ ಎಲ್ಲರೂ ಇದ್ದಾರೆ. ಯಾರಿಗೂ ರ‍್ಯಾಂಕಿಂಗ್ ಕೊಡೋಕೆ ಆಗುವುದಿಲ್ಲ ಎಂದು ಆರೋಪಿಸಿದರು.

    ಸ್ವಾತಂತ್ರ್ಯ ದಿನಾಚರಣೆ ವೇಳೆ ಭ್ರಷ್ಟಾಚಾರದ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು. ದೇಶಕ್ಕೆ ಭ್ರಷ್ಟಾಚಾರ ದೊಡ್ಡ ಮಾರಕ, ಶತ್ರು ಎಂದಿರುವ ಮೋದಿ ಅವರ ಮಾತನ್ನೇ ಉಲ್ಲೇಖಿಸಿ‌ ಅಭಿನಂದನೆ ಪತ್ರ ಬರೆಯಲು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮುಂದಾಗಿದ್ದಾರೆ.
    ಗುತ್ತಿಗೆದಾರರು ದೂರು ನೀಡಿ ಒಂದೂವರೆ ವರ್ಷವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೆಂಪಣ್ಣ ಪ್ರಸ್ತಾಪಿಸಲಿದ್ದಾರೆ. ಈ ಮೂಲಕ ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಮತ್ತೆ ಮುಂಚೂಣಿಗೆ ತರಲು ಗುತ್ತಿಗೆದಾರರ ಸಂಘ ಮುಂದಾಗಿದೆ.

    ಈ ಮಧ್ಯೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಭೇಟಿ ಮಾಡಿರುವ ಗುತ್ತಿಗೆದಾರರ ಸಂಘದ ನಿಯೋಗ ಚರ್ಚೆ ನಡೆಸಿದೆ. ಸಿದ್ದರಾಮಯ್ಯಗೆ ನಾವು ಎಲ್ಲಾ ಮಾಹಿತಿ ಕೊಟ್ಟಿದ್ದೇವೆ. ಸದನದಲ್ಲಿ ಅದನ್ನು ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಕೆಂಪಣ್ಣ ಹೇಳಿದರು.
    ಆದರೂ ನಾನು ಯಾವುದೇ ದಾಖಲೆಗಳನ್ನು

    ಸಿದ್ದರಾಮಯ್ಯಗೆ ಕೊಟ್ಟಿಲ್ಲ. ನ್ಯಾಯಾಂಗ ತನಿಖೆ ಮಾಡಿದರೆ ಮಾತ್ರ ದಾಖಲೆ ಕೊಡುತ್ತೇವೆ. ದಾಖಲೆಯನ್ನು ನಾನು ಬಹಿರಂಗ ಪಡಿಸಿದರೆ ಗುತ್ತಿಗೆದಾರರಿಗೆ ತೊಂದರೆ ಆಗುತ್ತದೆ ಎಂಬ ಭಯ ಇದೆ ಎಂದು ಅವರು ಹೇಳಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    ತುಮಕೂರು: ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಹೊರಗೆ ಉಳಿಯುತ್ತಿದ್ದು, ಆ ಮಕ್ಕಳನ್ನು ಶಾಲೆಗೆ ಮರಳಿ ಕರೆತರುವುದು ಆಯಾಯ…

    ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ

    February 15, 2026

    SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    February 15, 2026

    ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.