ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ರಾಷ್ಟ್ರೀಯ ಅಕಾಡೆಮಿ ಶಾಲೆಯಲ್ಲಿ ಕಸಬಾ ಹೋಬಳಿಯ ಕ್ರೀಡಾಕೂಟ ಆಯೋಜಿಸಲಾಯಿತು. ಶೆಟಲ್, ಖೋ ಖೋ , ಹೈಜಂಪ್, ಲಾಂಗ್ ಜಂಪ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಅಕಾಡೆಮಿ ಶಾಲೆಯ ಶಿಕ್ಷಕರಾದ ಪರಮೇಶ್, ಕ್ರೀಡೆಯು ನಮ್ಮ ಜೀವನದ ಒಂದು ಪ್ರಮುಖ ಭಾಗವಾಗಿದೆ. ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮ ಅಭಿವೃದ್ಧಿಯ ಮೂಲವಾಗಿದೆ ಎಂದರು.
ಕ್ರೀಡೆ ನಮ್ಮ ದೇಹದ ರಕ್ತ ಪರಿಚಲನೆಗೆ ಸಹಕಾರಿಯಾಗಿದೆ. ಮತ್ತೊಂದೆಡೆ ಇದು ನಮ್ಮ ಮೆದುಳಿನ ಬೆಳವಣಿಗೆಯಲ್ಲಿ ಪ್ರಯೋಜನಕಾರಿಯಾಗಿದೆ. ಕ್ರೀಡೆಗಳನ್ನು ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗುತ್ತದೆ. ಯಶಸ್ವಿ ವ್ಯಕ್ತಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಾಗಿರಲು, ಮಾನಸಿಕ ಬೆಳವಣಿಗೆಯು ನಮ್ಮ ಶಾಲಾ ದಿನಗಳಿಂದ ಪ್ರಾರಂಭವಾಗುತ್ತದೆ. ಆದರೆ ದೈಹಿಕ ಬೆಳವಣಿಗೆಗೆ ವ್ಯಾಯಾಮವು ಕ್ರೀಡೆಯ ಮೂಲಕ ನಾವು ಪಡೆಯುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರಾದ ಪರಮೇಶ್, ರಂಗನಾಥ್, ವಿಜಯ್ ಕುಮಾರ್ ನಾಯಕ, ಶಶಿಕಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್ ಚಿತ್ರದುರ್ಗ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz