ಕೊರಟಗೆರೆ: ಬಿರುಕು ಬಿದ್ದಿದ್ದ ತೀತಾ ಬ್ರೀಡ್ಜ್ ಸಂಪೂರ್ಣವಾಗಿ ಕುಸಿದಿದ್ದು, ಪರಿಣಾಮವಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಜಯಮಂಗಲಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿದ್ದ ಬ್ರಿಡ್ಜ್ ಕೊರಟಗೆರೆ ತಾಲೂಕಿನ ಗೊರವನಹಳ್ಳಿ –ತೀತಾ ಕುಸಿದಿದ್ದು, ಸೇತುವೆ ಭಾಗಶಃ ಕುಸಿದು ಅಪಾಯದಂಚಿನಲ್ಲಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಜಲಾಶಯದ ಮೂಗಳತೆ ದೂರದಲ್ಲಿ ಈ ಬ್ರಿಡ್ಜ್ ಇದ್ದು, ಬ್ರಿಡ್ಜ್ ಕುಸಿದ ಹಿನ್ನೆಲೆಯಲ್ಲಿ ಜಲಾಶಯದ ಮುಂಭಾಗದ ಮತ್ತೊಂದು ರಸ್ತೆ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪಿಡಬ್ಯುಡಿ ಅಧಿಕಾರಿಗಳು ಮತ್ತು ಮಾಜಿ ಶಾಸಕ ಪಿ ಆರ್ ಸುಧಾಕರ್ ಲಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೊಸ ಸೇತುವೆ ನಿರ್ಮಾಣ ಮಾಡಲು ಸುಮಾರು 6 ತಿಂಗಳ ಸಮಯ ಬೇಕಾಗಬಹುದು ಎಂದು ಪಿಡಬ್ಲ್ಯುಡಿ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz