ತುಮಕೂರು: ಗಣೇಶೋತ್ಸವ ನಿಮಿತ್ತ ಸಾವರ್ಕರ್ ಫ್ಲೆಕ್ಸ್ ಹಾಕಲು ಪೊಲೀಸರು ಅವಕಾಶ ನಿರಾಕರಿಸಿದ್ದು, ಅಳವಡಿಸಿದ್ದ ಫ್ಲೆಕ್ಸ್ ನ್ನು ತೆರವುಗೊಳಿಸಿದ್ದಾರೆ.
ತುಮಕೂರು ನಗರದ ಜಯನಗದ ಅನ್ನಪೂರ್ಣೇಶ್ವರಿ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಸಹಯೋಗದೊಂದಿಗೆ ನಡೆಯುತ್ತಿರುವ ಹಿಂದೂ ಏಕತಾ ಗಣೇಶೋತ್ಸವ ಸಮಿತಿಯಿಂದ ಅಳವಡಿಸಿದ್ದ ಫ್ಲೆಕ್ಸ್ ನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಫ್ಲೆಕ್ಸ್ ಅಳವಡಿಸಲು ಅನುಮತಿಗಾಗಿ ಅರ್ಜಿ ಕೊಟ್ಟರು ಪಾಲಿಕೆ ಅನುಮತಿ ನೀಡಿರಲಿಲ್ಲ. ನಿನ್ನೆ ಮಧ್ಯರಾತ್ರಿ ಫ್ಲೆಕ್ಸ್ ಗಳನ್ನು ಪೊಲೀಸರು ತೆರವುಗೊಳಿಸಿದ್ದು, ಈ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz