ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ತನಿಖೆ ಬಳಿಕ ಎಲ್ಲಾ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಘಾ ಶ್ರೀಗಳು ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸ ಇದೆ ಎಂದು ಹೇಳಿದರು.
ಈ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪೋಕ್ಸೋ ಕೇಸ್ ಹಾಗೂ ಕಿಡ್ನ್ಯಾಪ್ ಕೇಸ್ ದಾಖಲಾಗಿದೆ. ಎರಡು ಪ್ರಕರಣಗಳನ್ನ ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಈಗ ಮಾತನಾಡುವುದು ಸೂಕ್ತವಲ್ಲ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz